ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಶ್ರೀನಿವಾಸಲು ನೇಮಕ


ಸಂಜೆವಾಣಿ ವಾರ್ತೆ
ಬಳ್ಳಾರಿ:ಫೆ,7-  ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಬಳ್ಳಾರಿ ಜಿಲ್ಲೆಯ ನೂತನ  ಅಧ್ಯಕ್ಷರಾಗಿ ಬಳ್ಳಾರಿ ನಗರದ ಜೆ.ಎಸ್.ಶ್ರೀನಿವಾಸ್ ಅವರು ನೇಮಕವಾಗಿದ್ದಾರೆ.
ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು, ಶ್ರೀನಿವಾಸ್ ಅವರನ್ನು ನೇಮಿಸಿ ಈ ಆದೇಶ ಹೊರಡಿಸಿದ್ದಾರೆ. ಸಮುದಾಯವನ್ನು ತಳಮಟ್ಟದಿಂದ ಸಂಘಟಿಸಿ, ಬಲಪಡಿಸುವುದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಸಮುದಾಯದ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ರಾಜ್ಯಾಧ್ಯಕ್ಣ ಸಿದ್ದಯ್ಯ ಅವರು ನೇಮಕಾತಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸೋಮವಾರ ಛಲವಾದಿ ಮಹಾಸಭಾಕ್ಕೆ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಮಹಾಸಭಾದ ರಾಜ್ಯಾಧ್ಯಕ್ಷ‌‌ ಸಿದ್ದಯ್ಯ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.