ಜಂಬಗಾ ಗ್ರಾಮಸ್ಥರಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ,ಜ.5- ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಬೇಕು, ಹಾಗೂ ಹಂದಿಗಳ ಹಾವಳಿಯನ್ನು ತಪ್ಪಿಸಬೇಕು, ಬೆಳೆ ಹಾನಿ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ಕೃಷಿಕಾರ್ಮಿಕರ ಸಂಘನೆ ನೆತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿತು.
ಕಳೆದ 6 ತಿಂಗಳ ಹಿಂದೆ ಜಂಬಗಾ (ಬಿ) ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಲು ಆಗ್ರಹಿಸಿ ಮನವಿ ಪತ್ರವನ್ನು ನೀಡಲಾಗಿತ್ತು. ಆದರೆ ಇಲ್ಲಿಯವರೆಗೂ ಗ್ರಾಮ ಪಂಚಾಯತಿಯು ಈ ನಿಟ್ಟಿನಲ್ಲಿ ಯಾವುದೇ ಪ್ರಗತಿಯನ್ನು ಸಾಧಿಸದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಗ್ರಾಮ ಪಂಚಾಯತಿಯ ಈ ಬೇಜವಬ್ದಾರಿತನವವನ್ನು ಸಂಘಟನೆ ಕಾರ್ಯಕರ್ತರು ಖಂಡಿಸಿದರು.
ಶುದ್ಧಕುಡಿಯುವ ನೀರು ಇಲ್ಲದೆ ಹಲವಾರು ಸಾಂಕ್ರಾಮಿಕ ರೋಗಗಳಿಗೆ ಜನರು ತುತ್ತಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಆದ್ದರಿಂದ, ಗ್ರಾಮ ಪಂಚಾಯತ ಮಟ್ಟದಲ್ಲಿ ಜಾಗೃತಿ ಅಭಿಯಾನಗಳು ಹೆಚ್ಚೆಚ್ಚು ನಡೆದು ಜನರಿಗೆ ಸರಿಯಾದ ಜಾಗೃತಿಯನ್ನು ಮೂಡಿಸಲು ಪ್ರಯತ್ನಿಸಬೇಕೆಂದು ಒತ್ತಾಯಿಸಲಾಯಿತು.
ಉತ್ತಮ ಆರೋಗ್ಯಕ್ಕೆ ಮೂಲ ಆಧಾರವಾಗಿರುವ ಕುಡಿಯುವ ನೀರು ಗ್ರಾಮೀಣ ಬಡವರಿಗೆ ಕಡಿಮೆ ದರದಲ್ಲಿ ಸಿಗಬೇಕಾಗಿರುವುದು ಅವಶ್ಯಕವಾಗಿದೆ. ಆದ್ದರಿಂದ ಜಂಬಗಾ ಬಿ. ಗ್ರಾಮದಲ್ಲಿ ಅತಿಹೆಚ್ಚು ರೈತರು ಮತ್ತು ಕೂಲಿ ಕಾರ್ಮಿಕರಿರುವ ಈ ಪ್ರದೇಶದಲ್ಲಿ ಶುದ್ಧ ನೀರಿನ ಘಟಕದ ಅವಶ್ಯಕತೆ ತುಂಬಾ ಇದೆ. ಆದ್ದರಿಂದ, ಮೊದಲ ಆದ್ಯತೆಯ ಮೇರೆಗೆ ಜಂಬಗಾ ಬಿ. ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಬೇಕೆಂದು ನಾವು ಕೋರುತ್ತೇವೆ.
ಇನ್ನೊಂದೆಡೆ, ಗ್ರಾಮದಲ್ಲಿ ನೂರಾರು ಹಂದಿಗಳ ಹಾವಳಿಯಿಂದ ಗ್ರಾಮಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಗ್ರಾಮದ ನೈರ್ಮಲ್ಯವೂ ಹಾಳಾಗುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳೂ ಇವೆ. ಅಡವಿಯಲ್ಲಿ ಸೇರಿಕೊಂಡಿರುವ ಹಂದಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಹಂದಿಗಳ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಬೆಳೆ ಕಳೆದುಕೊಂಡ ಗ್ರಾಮದ ರೈತರು ಬೆಳೆಯಿಂದ ಬರಬೇಕಾಗಿದ್ದ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಗ್ರಾಮದಲ್ಲಿ ಹೆಚ್ಚಾಗಿರುವ ಹಂದಿಗಳ ಕಾಟದಿಂದ ತಪ್ಪಿಸಲು ಅವುಗಳನ್ನು ನಿಗ್ರಹಿಸಬೇಕೆಂದು ಮತ್ತು ಅಡವಿ ಹಂದಿಗಳ ಹಾವಳಿಯನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಂIಏಏಒS) ಹಾಗೂ ಗ್ರಾಮಸ್ಥರು ಜಂಟಿಯಾಗಿ ಮನವಿ ಮಾಡಿದ್ದಾರೆ.
ಈ ಕೂಡಲೇ ಜಂಬಗಾ (ಬಿ) ಗ್ರಾಮದಲ್ಲಿ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಿ. ಗ್ರಾಮದಲ್ಲಿ ಹೆಚ್ಚಾಗಿಗಿರುವ ಹಂದಿಗಳನ್ನು ನಿಗ್ರಹಿಸಲು ಕ್ರಮಕೈಗೊಳ್ಳಿ. ಬೆಳೆಗಳನ್ನು ನಾಶಮಾಡುತ್ತಿರುವ ಅಡವಿ ಹಂದಿಗಳ ಹಾವಳಿಯನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು..
ಪ್ರತಿಭಟನೆಯಲ್ಲಿ ಮಹೇಶ ಬಿಎಲ್, ದೀಪಾ ಡಿಗ್ಗಾವಿ, ಹರಿಷ ಸಂಗಾಣಿ, ಭೀಮಾಶಂಕರ ಆದೋಂಲಾ, ವಿಶ್ವನಾಥ ಸಿಂಘೆ, ಗುಂಡೆರಾಯ ಪಾಟೀಲ, ಶರಣಬಸಪ್ಪ ಬಾಬನಗೋಳ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.