
ಸೈದಾಪುರ:ಎ.6:ಡಾ.ಬಾಬು ಜಗಜೀವನ ರಾಂ ಅವರ ಆದರ್ಶಗಳನ್ನು ನಮ್ಮದಾಗಿಸಿಕೊಂಡು ಸಮಾಜದಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂದು ಮುಖ್ಯಗುರು ಲಿಂಗಾರೆಡ್ಡಿ ನಾಯಕ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಸಂಘದ ವಿವಿಧ ವಿಭಾಗಗಳ ವತಿಯಿಂದ ಹಮ್ಮಿಕೊಂಡ ಡಾ.ಬಾಬು ಜಗಜೀವನರಾಂ ರವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪ ಪ್ರಧಾನಿಗಳಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಅವರು ಮಾಡಿದ ಕಾರ್ಯ ದೇಶಕ್ಕೆ ಮಾದರಿಯಾಗಿದೆ. ಅವರ ತತ್ವ ಸಿದ್ಧಾಂತಗಳು ಉತ್ತಮ ಸಮಾಜ ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಪ್ರಾಂಶುಪಾಲರಾದ ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಸಾಬಯ್ಯ ರಾಯಪ್ಪನೋರ, ರಾಚಯ್ಯಸ್ವಾಮಿ ಬಾಡಿಯಾಲ, ಬೀಮಣ್ಣ ನಾಯಕ, ಸತೀಶ ಪುರ್ಮಾ, ಆನಂದ ಪಾಟೀಲ ಕೊಂಡಾಪುರ, ಸಂಗಾರೆಡ್ಡಿ ಸೇರಿದಂತೆ ಇತರರಿದ್ದರು.