ಜಗತ್ತಿನ ಅತಿ ದೊಡ್ಡ ಸಂವಿಧಾನ ಭಾರತದ್ದು- ಕೊಟ್ರೇಶ್

ಸಂಡೂರುಜ:27: ಭಾರತ ಇಡೀ ಜಗತ್ತಿನಲ್ಲಿಯೇ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿದ್ದು ಅದರ ಅಡಿಯಲ್ಲಿದೇಶವನ್ನು ನಡೆಸುತ್ತಿದ್ದ, ಈ ದಿನವನ್ನು ನಾವು ಗಣರಾಜ್ಯೋತ್ಸವ ಎಂದು ಹಬ್ಬವಾಗಿ ಆಚರಿಸುತ್ತಿದ್ದೇವೆ ಎಂದು ಪ್ರಾಂಶುಪಾಲರಾದ ಕೊಟ್ರೇಶ್ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣದ ಉಪನ್ಯಾಸಕ ಸಿದ್ದೇಶ್, ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು,