ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನ ನಮ್ಮದು:ದಂಡಿಗಿಮಠ

ಸೈದಾಪುರ:ನ.28:ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಹೊಂದಿರುವ ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದೆ ಎಂದು ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಹೇಳಿದರು.
ಇಲ್ಲಿನ ವಿದ್ಯಾ ವರ್ಧಕ ಡಿ.ಎಲ್.ಇಡಿ ಕಾಲೇಜಿನಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿ ಬರಹಕ್ಕೆ ಮುಂದಾದ ಮೇದಾವಿ ಅಂಬೇಡ್ಕರ್ ಅವರು ಜಗತ್ತಿನ ನಾನಾ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಅವುಗಳಲ್ಲಿನ ಅವಶ್ಯಕ ಅಂಶಗಳನ್ನು 26ನೇ ನವೆಂಬರ್ 1949ಕ್ಕೆ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ದಿನವನ್ನೇ ನಾವಿಂದು ಭಾರತ ಸಂವಿಧಾನ ದಿನ ಎಂದು ಆಚರಿಸುತ್ತಿರುವುದಾಗಿ ತಿಳಿಸಿದರು. ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಆನಂದ ಪಾಟೀಲ ಕೊಂಡಾಪುರ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಇದ್ದರು.