
(ಸಂಜೆವಾಣಿ ವಾರ್ತೆ)
ಬಳ್ಳಾರಿ ಮೇ 06 : ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಅವರು ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರವಾಗಿ ನಿನ್ನೆ ಮತಯಾಚನೆ ಮಾಡಿದ್ದಾರೆ.
ಚುನಾವಣೆ ಅಂಗವಾಗಿ ನಡೆದ ಮಹಾ ಸಭೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ, ಮಾಜಿ ಸಚಿವ ವೀರಣ್ಣ ಮತ್ತಿಕಟ್ಟಿ, ಮಾಜಿ ಸಂಸದ ಕೆ.ಸಿ.ಕೊಂಡಯ್ಯ, ಮಾಜಿ ಶಾಸಕ ಡಿ.ಆರ್.ಪಾಟೀಲ್ ಮೊದಲಾದವರು ಸಭೆಯಲ್ಲಿದ್ದರು.
ಬಿಜೆಯಲ್ಲಿನ ಮತ್ತೊಂದು ಮೇಲ್ವರ್ಗದ ಸಮುದಾಯ ನಮ್ಮ ಲಿಂಗಾಯತ ಸಮುದಾಯವನ್ನು ಮೂಲೆ ಗುಂಪು ಮಾಡಲುನಡೆಸಿದ ಪ್ರಯತ್ನದ ಫಲವೇ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಸಿದೆ. ಈಗ ನಾವು ಅದಕ್ಕೆ ಉತ್ತರವಾಗಿ ಶೆಟ್ಟರ್ ಅವರನ್ನು ಹೆಚ್ಚಿನ ಮತದಿಂದ ಆಯ್ಕೆ ಮಾಡುವ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಕರೆ ನೀಡಿದರು.