
ಲಿಂಗಸುಗೂರ,ಏ.೧೨- ರಾಜ್ಯದ ಬಿಜೆಪಿ ಪಕ್ಷದ ಪ್ರಭಾವಿ ರಾಜಕಾರಣಿ ನಾಯಕ ಲಿಂಗಾಯತ ಸಮುದಾಯದ ಪ್ರಬಲ ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನೀಡಲು ಕೇಂದ್ರ ರಾಜ್ಯ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಬೇಕು ಎಂದು ಟಿಎಸಿ ಸದಸ್ಯರಾದ ಸಂಜೀವ ಕುಮಾರ್ ಕಂದಗಲ್ ಇವರು ಇಂದು ಲಿಂಗಸುಗೂರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ರಾಜ್ಯ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿ ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇವರಿಗೆ ಟಿಕೆಟ್ ನೀಡಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಕೂಡಲೇ ಮುಂದೆ ಬರಬೇಕು ಎಂದರು.
ಕಳಂಕ ರಹಿತ ನಾಯಕನಿಗೆ ಮುಂಬರುವ ವಿಧಾನಸಭಾ ೨೦೨೩ರ ಚುನಾವಣೆಯಲ್ಲಿ ಟಿಕೆಟ್ ಕೊಡಬೇಕು ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಈ ರಾಜ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಉತ್ತರ ಕರ್ನಾಟಕದ ಭಾಗದಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನೀಡಲು ಕಂದಗಲ್ ಒತ್ತಾಯಿಸಿದ್ದಾರೆ..
ಬಿಜೆಪಿ ಪಕ್ಷವು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡದೆ ಇದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹಳ ಕಷ್ಟವಾದ ಕೆಲಸ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಜಗದೀಶ್ ಶೆಟ್ಟರ್ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂಬುದು ಲಿಂಗಾಯತ ಸಮುದಾಯದ ಮುಖಂಡರ ಆಶಯವಾಗಿದೆ.
ಜಗದೀಶ್ ಶೆಟ್ಟರ್ ಅವರು ಜನಸಂಗ ಪಾರ್ಟಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ.ಹಾಗು ರಾಜ್ಯ ರಾಜಕೀಯದಲ್ಲಿ ಜಾತ್ಯಾತೀತ ನಾಯಕ ರಾಗಿ ಹೊರಹೊಮ್ಮುವ ಮೂಲಕ ಎಲ್ಲಾ ಸಮುದಾಯಗಳ ಜನನಾಯಕ ಎಂದರೆ ತಪ್ಪಾಗಲಾರದು ಅದಕ್ಕಾಗಿ ಹೈಕಮಾಂಡ್ ಇಂತಹ ನಾಯಕರನ್ನು ಕಡೆಗಣಿಸದೆ ಎರಡನೆ ಪಟ್ಟಿಯಲ್ಲಿ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಎಂದು ಘೋಷಣೆ ಮಾಡಬೇಕು ಎಂದು ಸಂಜೀವ ಕುಮಾರ್ ಕಂದಗಲ್ ಆಗ್ರಹವಾಗಿದೆ.