ಜಗದೀಶ್ ಶೆಟ್ಟರ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ; ರಾಮ್ ತಳವಾರ ಹರ್ಷ

ಕಲಬುರಗಿ ;ಜ.27: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಯುವ ಮುಖಂಡ ರಾಮ್ ತಳವಾರ ಹಸರಗುಂಡಗಿ ಹರ್ಷ ವ್ಯಕ್ತಪಡಿಸಿದರು.

ಪತ್ರಿಕಾ ಪ್ರಕಟಣೆ ಮೂಲಕ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಮರಳಿ ಪಕ್ಷಕ್ಕೆ ಬಂದಿರುವುದರಿಂದ ಹೊಸ ಯುಗ ಆರಂಭವಾಯಿತು. ಬರುವ ದಿನಗಳಲ್ಲಿ ಅಫಜಲಪುರ ತಾಲೂಕಿನ ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ ಅವರ ನೇತೃತ್ವದಲ್ಲಿ ಹಲವಾರು ನಾಯಕರು ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ
ಎಂದು ರಾಮ್ ತಳವಾರ ತಿಳಿಸಿದರು.

ನೂತನ ಬಿಜೆಪಿ ಪಕ್ಷದ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಬದಲಾವಣೆ ಗಾಳಿ ಪ್ರಾರಂಬವಾಗಿದೆ.ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಪಣ ತೊಟ್ಟು ಹಗಲು ರಾತ್ರಿ ಪಕ್ಷ ಸಂಘಟನೆಯಲ್ಲಿ ಕಾರ್ಯನಿರತರಾಗಿದ್ದು ತುಂಬಾ ಹೆಮ್ಮೆಯ ವಿಷಯ ಎಂದು ತಳವಾರ ಅಭಿಪ್ರಾಯ ಪಟ್ಟಿದ್ದಾರೆ