ಜಗದೇವ ಕುಂಬಾರಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

ಕಲಬುರಗಿ:ಜು.9: ಜಿಲ್ಲಾ ಕುಂಬಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಎಸ್ ಕುಂಬಾರ ಅವರನ್ನು ಕುಂಬಾರರ ನಿಗಮ ಮಂಡಳಿ ಅಧ್ಯಕ್ಷರಾಗಿ ಮಾಡಬೇಕು ಎಂದು ಕುಂಬಾರ ಸಮಾಜದ ಮುಖಂಡ ದೌಲತರಾಯ ಕುಂಬಾರ ಅವರು ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರಕಟಣೆ ನೀಡಿ ಮಾತನಾಡಿದ ಅವರು ಕುಂಬಾರ ಸಮಾಜ ಜಾಗೃತಿಗಾಗಿ ಹಾಗೂ ಹಗಲು-ಇರುಳು ಅನ್ನದೆ ಸುಮಾರು ವರ್ಷಗಳಿಂದ ಶ್ರಮಿಸುತ್ತಿದ್ದಾರೆ. ಹಾಗೂ ಉನ್ನತ ಶಿಕ್ಷಣ ಪಡೆಯುವುದರ ಜೊತೆಗೆ ಚಿತ್ತಾಪುರ ತಾಲ್ಲೂಕು ಸೇರಿ ಜಿಲ್ಲೆಯಲ್ಲಿ, ಮತ್ತು ರಾಜ್ಯ ಮಟ್ಟದಲ್ಲಿ ಎಲೇ ಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ.

ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕುಂಬಾರ ಸಮಾಜ ಸಣ್ಣ ಸಮುದಾಯವಾದರೂ ಸಮಾಜದ ಮತಗಳು ಕಾಂಗ್ರೇಸ್ ಪಕ್ಷದ ಪರವಾಗಿ ಮತ ಹಾಕಿಸಲು ಅವರ ಶ್ರಮ ಬಹಳವಿದೆ ಇವರಿಗೆ ನಿಗಮ ಮಂಡಳಿ ಅಧ್ಯಕ್ಷ ನೀಡಿದ್ದೆ ಆದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವದರಿಂದ ಕುಂಬಾರ ಸಮಾಜದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕಾಗಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಜಿಲ್ಲಾ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ನೂತನ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯನವರಲ್ಲಿ, ಕೆಪಿಸಿಸಿ ಅಧ್ಯಕ್ಷರು ಮತ್ತು ನೂತನ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಇವರಲ್ಲಿ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.