ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ 


ಸಂಜೆವಾಣಿ ವಾರ್ತೆ
ಗಂಗಾವತಿ, ಮಾ.12: ಬೇಡ ಜಂಗಮ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಜಯನಗರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ ರೇಣುಕಾರ್ಚಾರರ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದವರಲ್ಲಿ ಇವರ ಪಾತ್ರ ಬಹಳ ಮುಖ್ಯವಾಗಿದೆ.ಈಗಿನ ಯುವ ಪೀಳಿಗೆ ಅವರ ತತ್ವ ಆದರ್ಶ ಗಳನ್ನು ಮೈಗೂಡಿಸಿಕೊಂಡು ಸರ್ವ  ಸಮಾಜದವರು ಅಭಿವೃದ್ಧಿ ಗೊಳ್ಳಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ಹೆಬ್ಬಾಳ ಬೃಹನ್ಮಠ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಈ ವೇಳೆ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ ಇದ್ದರು.
ಈ ಸಂದರ್ಭದಲ್ಲಿ ಮುಖಂಡರಾದ ಸೂರಿಬಾಬು ನೆಕ್ಕಂಟಿ, ಬೀಚಿ ಪ್ರಾಣೇಶ್,  ಹನುಂಮತಪ್ಪ ನಾಯಕ, ಜೋಗದ ನಾರಯಣಪ್ಪ, ಸಮಾಜದ ಬಂಧುಗಳು ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.