ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

(ಸಂಜೆವಾಣಿ ವಾರ್ತೆ)
ಔರಾದ :ಮಾ.6: ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಪ್ರಯುಕ್ತ ಗ್ರೇಡ್-2 ತಹಸೀಲ್ದಾರ ಮಲಶೆಟ್ಟಿ ಚಿದ್ರೆ ಅವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವೀರಶೈವ ಸಮಾಜದ ಹಿರಿಯ ಮುಖಂಡ ಬಸವರಾಜ ದೇಶಮುಖ, ರಾಮಣ್ಣ ವಡಿಯಾರ, ಆನಂದ ದ್ಯಾಡೆ, ಸಚ್ಚಿದಾನಂದ ಸ್ವಾಮಿ, ಸೂರ್ಯಕಾಂತ ಸ್ವಾಮಿ, ಅಮರಸ್ವಾಮಿ ಸ್ಥಾವರಮಠ, ಹಣಮಂತ ನವಾಡೆ, ಶ್ರೀದೇವಿ ನವಾಡೆ, ರವಿಕಾಂತ ಬಂಬುಳಗೆ, ವೀರೇಶ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.