
ಕೋಲಾರ,ಮಾ೧೫- ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ವೀರಶೈವ ಲಿಂಗಾಯಿತ ಇವರ ಸಹಯೋಗದಲ್ಲಿ ವೀರಶೈವ ಧರ್ಮ ಸಂಸ್ಥಾಪನಾಚಾರ್ಯ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಕಾರ್ಯಕ್ರಮವನ್ನು ಮಾ ೧೬ರ ಗುರುವಾರ ಟಿ.ಚೆನ್ನಯ್ಯ ರಂಗ ಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.
ಬೆಳ್ಳಾವಿ ಸಂಸ್ಥಾನ ಮಠದ ಶ್ರೀ ಷಬ್ರ ಮಹಂತ ಶಿವಾಚಾರ್ಯ ಸ್ವಾಮಿಗಳು ಹಾಗೂ ಶ್ರಿಮದ್ ನಾಗಲಪುರ ಸಂಸ್ಥಾನ ಮಠ ಶ್ರೀ ಷಬ್ರ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ರಾಜ್ಯ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮುನಿರತ್ನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಲೋಕಸಭಾ ಸದಸ್ಯ ಎಸ್. ಮುನಿಸ್ವಾಮಿ ಘನ ಉಪಸ್ಥಿತಿಯಲ್ಲಿ ಶಾಸಕ ಕೆ. ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ, ಮುಳಬಾಗಿಲು ಶಾಸಕ ಎಚ್.ನಾಗೇಶ್, ಶ್ರೀನಿವಾಸಪುರ ಶಾಸಕ ಕೆ.ಆರ್. ರಮೇಶ್,ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ನಸೀರ್ ಆಹಮದ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆ.ಜಿ.ಎಫ್ ಶಾಸಕ ರೂಪಕಲಾ ಎಂ. ಶಶಿಧರ್, ವಿಧಾನಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಛಲವಾದಿ ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಎಂ.ಎಲ್.ಅನಿಲ್ ಕುಮಾರ್, ಮಾವು ಮಂಡಳಿ ನಿಗಮ ನಿಯಮಿತ ಎಂ.ಕೆ.ವಾಸುದೇವ್, ನಗರಸಭೆ ಅಧ್ಯಕ್ಷೆ ಶ್ವೇತಾ ಶಬರೀಶ್, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು, ಜಿಲ್ಲಾ ಕನ್ನಡ ಸಾಹಿತ ಪರಿಷತ್ತು ಅಧ್ಯಕ್ಷ ಎನ್.ಬಿ. ಗೋಪಾಗೌಡ ಭಾಗವಹಿಸಲಿದ್ದಾರೆ.
ಗೃಹ ರಕ್ಷಕ ದಳದ ಮಾಜಿ ಕಮಾಂಡೆಂಟ್ ಡಾ.ಬಿ.ಮರಿಸ್ವಾಮಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಎಸ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ ರೆಡ್ಡಿ.ಎಸ್. ಹಾಜರಿರುವರು,
ಇದಕ್ಕೂ ಮುನ್ನ ನಗರದ ಗಾಂಧಿವನದಿಂದ ಮಂಗಳ ಕಲಶ, ಮುಂಗಳವಾಧ್ಯ ಪೂರ್ಣ ಕುಂಭ, ವೀರಗಾಸೆ, ಡೊಳ್ಳು ಕುಣಿತ, ಚಂಡಿ ವಾದ್ಯ,ನಾಸಿಕ್ ವಾದ್ಯ ಹಾಗೂ ವೈಭವಗಳೊಂದಿಗೆ ಎಂ.ಜಿ.ರಸ್ತೆ ಮೂಲಕ ರಂಗಮಂದಿರದವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಪಲ್ಲಕ್ಕಿ ಉತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸ ಬೇಕೆಂದು ಶ್ರೀ ವೀರಶೈವ ಲಿಂಗಾಯಿತ ಸಮಾಜ ಮನವಿ ಮಾಡಿದೆ.