ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ

ಸಿರವಾರ,ಮಾ.ಂ೫- ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದ ಜಗದ್ಗುರು ಶ್ರೀರೇಣುಕಾಚಾರ್ಯರ ಜಯಂತಿ ಆಚರಣೆ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಗಣದಿನ್ನಿ ಗ್ರಾ.ಪಂ ಸದಸ್ಯ ಸೂಗುರಯ್ಯಸ್ವಾಮಿ ಹೇಳಿದರು.
ತಾಲೂಕಿನ ಗಣದಿನ್ನಿ ಗ್ರಾ.ಪಂಚಾಯತಿಯಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ.
ಕಲಿಯುಗದಲ್ಲಿ ಮಾನವನು ಆಸೆ, ಅಸೂಯೆಗಳನ್ನು ತೊಡೆದು ಹಾಕಿ ಸಮಾಜದ ಒಳಿತಿಗಾಗಿ ಬದುಕಬೇಕು. ಧರ್ಮವನ್ನು ರಕ್ಷಣೆ ಮಾಡುವವರು ನಾವು, ಆದರೆ ಧರ್ಮವೆ ನಮ್ಮನ್ನು ರಕ್ಷಣೆ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜ್ಯೋತಿ ಸ್ವರೂಪಿಯಾದ ರೇಣುಕಾಚಾರ್ಯರು ಸಮಾಜ ಬದಲಾವಣೆಗೆ ಸಂದೇಶಗಳನ್ನು ನೀಡಿದ್ದಾರೆ. ಅವರ ಸಂದೇಶಗಳನ್ನು ಪಾಲಿಸುತ್ತ ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮಾನತೆಯಿಂದ ಬದುಕಬೇಕು. ಜಗದ್ಗುರು ರೇಣುಕಾಚಾರ್ಯರು.
ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಈ ಸಂದರ್ಭದಲ್ಲಿ ಶರಣಯ್ಯ ಸ್ವಾಮಿ, ಅಮರಯ್ಯ ಸ್ವಾಮಿ, ರವಿ ಪಾಟೀಲ್, ಶಿವಯ್ಯ ಸ್ವಾಮಿ, ಕಿಷ್ಠರಡ್ಡಿ ಗೌಡ, ಹೆಮಣ್ಣ ವಿಶ್ವಕರ್ಮ ಅಂಜಿನಯ್ಯ ಸೇರಿದಂತೆ ಇನ್ನಿತರರು ಇದ್ದರು.