ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಗದಗ, ಮೇ 14: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ರವಿವಾರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಪೂಜೆ ಮತ್ತು ಪುಷ್ಪಾರ್ಚನೆ ಮೂಲಕ ಆಚರಿಸಲಾಯಿತು.

ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಜಗದ್ಗುರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.