ಜಗಳೂರಿನಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

ಜಗಳೂರು.ಜು.೨೨;  ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಜಿಲ್ಲಾಧ್ಯಕ್ಷರಾದ ಷಡಾಕ್ಷರಪ್ಪ ರವರ ಅಧ್ಯಕ್ಷತೆಯಲ್ಲಿ ಪ್ರೇರಣ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಈ ವರ್ಷದ ಕ್ರಿಯಾಯೋಜನೆಯ ಪ್ರಕಾರ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಅನುಷ್ಠಾನಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಲಾಯಿತು.ಸಭೆಯಲ್ಲಿ ಹಿಂದಿನ ವರ್ಷಗಳ ಯೋಜನೆ ಅನುಷ್ಠಾನಗಳ ಬಗ್ಗೆ ಚರ್ಚಿಸಲಾಯಿತು.ಈ ವರ್ಷದ ಮಧ್ಯವರ್ಜನ ಶಿಬಿರ ಸ್ವಾಸ್ಥ್ಯ ಸಂಕಲ್ಪ, ನವಜೀವನ ಸಮಿತಿ ಪುನಶ್ಚೇತನ, ಹಕ್ಕೊತ್ತಾಯ ಕಾರ್ಯಕ್ರಮ, ಗಾಂಧೀ ಜಯಂತಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಮೂರು ತಿಂಗಳಿಗೊಮ್ಮೆ ಜನಜಾಗೃತಿ ವೇದಿಕೆಯ ಸಭೆ ನಡೆಸುವ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳ ಯೋಜನಾ ಕಚೇರಿಗಳಲ್ಲಿ ದಾಖಲೀಕರಣ, ನವಜೀವನ ಸಮಿತಿ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ, ತಾಲೂಕು ಮಟ್ಟದ ನವ ಜೀವನೋತ್ಸವ ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.ಸಭೆಯಲ್ಲಿ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಮೂರ್ತಿ, ಡಾ.ಪಿ.ಎಸ್ ಅರವಿಂದನ್ ವೇದಿಕೆಯ ಗೌರವ ಸಲಹೆಗಾರರಾದ ಚರ್ಚ್ ಫಾದರ್ ವಿಲಿಯಂ ಮಿರಾಂಡಾ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್, ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ, ಉಪಾಧ್ಯಕ್ಷರಾದ ಆನಂದನ್, ಜಿಲ್ಲಾ ವೇದಿಕೆಯ ಪದಾಧಿಕಾರಿಗಳು, ನಿರ್ದೇಶಕರು, ತಾಲೂಕಿನ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.