ಜಗಳೂರಿನಲ್ಲಿ  ಬಿಜೆಪಿ ಜನಸಂಕಲ್ಪ ಯಾತ್ರೆ; ಬೃಹತ್ ವೇದಿಕೆ ಸಜ್ಜು 

ಜಗಳೂರು.ನ.೨೧: ಬಿಜೆಪಿ ಜನ ಸಂಕಲ್ಪ ಯಾತ್ರೆ ಇದೇ ನ.23ರಂದು  ಜಗಳೂರಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದ್ದು 35 ಸಾವಿರ ಜನ ಕೂರಲು ಬೃಹತ್ ವೇದಿಕೆ ಸಿದ್ಧವಾಗಿದೆ.ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಗೆ ಸೆಡ್ಡು ಹೊಡೆದು ರಾಜ್ಯದಾದ್ಯಂತ ಜನ ಸಂಕಲ್ಪ ಯಾತ್ರೆ ಮಾಡಲು ತೀರ್ಮಾನಿಸಿದ್ದು ಕಳೆದ ತಿಂಗಳಿಂದ ಈಗಾಗಲೇ ರಾಜ್ಯದಾದ್ಯಂತ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಮೂಲಕ ತಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನತೆಯ ಮುಂದಿಡಲು ತೀರ್ಮಾನಿಸಿದೆ. ಹೀಗಾಗಿ ನ.23ರಂದು ಜಗಳೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಿಎಂ ಸಿದ್ದೇಶ್ವರ ,ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದ್ದಾರೆ.