ಜಗಳೂರಿನಲ್ಲಿ ಸಂಭ್ರಮದ ರಂಜಾನ್ ಹಬ್ಬ ಆಚರಣೆ

ಸಂಜೆವಾಣಿ ವಾರ್ತೆ

ಜಗಳೂರು.ಏ.೧೧; ತಾಲೂಕಿನಲ್ಲಿ ಹಿಂದು ಮುಸ್ಲಿಂ ಬಾಂಧವರು ಸಹೋದರರಂತೆ ಜೀವನ ನಡೆಸುತ್ತಿದ್ದೇವೆ ರಂಜಾನ್ ಹಬ್ಬವು ಮುಸ್ಲಿಂ ಸಮುದಾಯಕ್ಕೆ ಪವಿತ್ರ ಹಬ್ಬವಾಗಿದೆ ಎಂದು ಶಾಸಕ .ಬಿ ದೇವೇಂದ್ರಪ್ಪ ಹೇಳಿದರು.ಗುರುವಾರ ಪಟ್ಟಣದ ರಂಜಾನ್ ಹಬ್ಬದ ಅಂಗವಾಗಿ ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು, ರಂಜಾನ್ ಹಬ್ಬವು ಮುಸ್ಲಿಂ ಸಮುದಾ ಯಕ್ಕೆ ಪವಿತ್ರ ಹಬ್ಬವಾಗಿದ್ದು ಉಳ್ಳವಾರು ಇಲ್ಲದವರಿಗೆ ನೀಡುವುದೆ ಹಬ್ಬದ ಸಂದೇಶವಾಗಿದೆ ಎಂದರು.ನಂತರ ಮಾತನಾಡಿ ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಂಜಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿ ತು.ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು.ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕೆಟ್ಟ ಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚರಣೆ ಎನ್ನಲಾಗಿದೆ.ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯ ಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರ ಣೆಯ ಉದ್ದೇಶವಾಗಿದೆ.ಇದೇ ವೇಳೆ ಜಗಳೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮುಸ್ಲಿಂ ಸಮಾಜದ ಹಿರಿಯರು ಮುಖಂಡರು ಮತ್ತು ಹಿರಿಯರು ಶಾಂತಿಯುತವಾಗಿ ಸ್ಲೋಗನ್ ಗಳನ್ನು ಕೂಗುವ ಮೂಲಕ ಧಾರ್ಮಿಕ ಮೆರವಣಿಗೆ ಮಾಡಿ ಈದ್ಗಾ ಮೈದಾನ ತಲುಪಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶೀರ್ , ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್.ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಬಿ ಮಹೇಶ್ವರಪ್ಪ. ಪಟ್ಟಣ ಪಂಚಾಯತಿ ಸದಸ್ಯರಾದ ಶಕೀಲ್, ಮಹಮ್ಮದ್ ಆಲಿ ಲುಕ್ಮಾನ್. ಇಕ್ಬಲ್ ಅಹಮದ್.ಕಲಂದರ್ ಸಾಬ್,ಅನ್ವರ್ ಸಾಬ್. ಶಂಶುದ್ದೀನ್. ಇಮಾಮ್ ಅಲಿ.ಅಕ್ತರ್ ಸಾಬ್ ಸೇರಿದಂತೆ ನೂರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿಲು ಭಾಗವಹಿಸಿ ಹಾಜರಿದ್ದರು.