ಜಗಳೂರು; ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಜಗಳೂರು.ಆ.೪; ಕೋಲಾರ ಜಿಲ್ಲೆ ಕಾಂಗ್ರೆಸ್ ಭವನದಲ್ಲಿ ವರದಿ ಮಾಡಲು ಹೋಗಿದ್ದ  ಪತ್ರಿಕೆ ವರದಿಗಾರರ ಮೇಲೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ಕುಮಾರ್ ಹಲ್ಲೆ ಮಾಡಿರುವುದು ಖಂಡನೀಯ. ಕೂಡಲೇ ಕ್ಷಮೆ ಕೇಳಬೇಕು ಎಂದು ಜಗಳೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಜಿ.ಎಸ್. ಚಿದಾನಂದ ಒತ್ತಾಯಿಸಿದ್ದಾರೆ.ಪಟ್ಟಣದದಲ್ಲಿ  ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಹಲ್ಲೆ ಖಂಡಿಸಿ ಕೂಡಲೇ ಕ್ಷಮೆಯಾ ಚಿಸಬೇಕು, ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಸಂತೋಷ್ ಕುಮಾರ್‌ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್‌ರವರು ಜನ ಪ್ರತಿನಿಧಿಯಾಗಿದ್ದು,ತಮ್ಮ ಸ್ಥಾನದ ಜವಾಬ್ದಾರಿಯನ್ನು ಮರೆತು ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವುದು  ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಅಭಿವ್ಯಕ್ತಿ ಸ್ವಾತಂತ್ಯದ ಹರಣವಾಗಿದೆ.ಪತ್ರಕರ್ತರ ಮೇಲೆ ಹಲ್ಲೆ ಇಂತಹ ಹಲ್ಲೆ ದೌರ್ಜನ್ಯಗಳನ್ನು ಸಂಘವು ಸಹಿಸುವುದಿಲ್ಲ.ಕೂಡಲೇ .ಆರ್.ರಮೇಶ್‌ಕುಮಾರ್‌ರವರು ಕ್ಷೇಮೆ ಕೇಳಬೇಕು. ಇಲ್ಲವಾದಲ್ಲಿ ಸರ್ಕಾರ ರಮೇಶ್‌ಕುಮಾರ್ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪತ್ರಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.ತಹಶೀಲ್ದಾರ್ ಸಂತೋಷ್‌ಕುಮಾರ್ ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಮ್ಮ ಮನವಿಯನ್ನು ಕಳುಹಿಸಲಾಗುವುದು ಎಂದವರು ತಿಳಿಸಿದರು.