ಜಗಳೂರು; ಶಿವಶರಣ ಹಡಪದ ಅಪ್ಪಣ್ಣ ಜಯಂತೋತ್ಸವ

ಜಗಳೂರು.ಜು.೧೩; ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತೋತ್ಸವದ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಯಿತು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜನೆ ಮಾಡಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್ ಜೆ. ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಬಿ ಮಹೇಶ್ವರಪ್ಪ ಇವರು ಪುಷ್ಪರ್ಚನೆ ಸಲ್ಲಿಸಿದರುನಂತರ  ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ ಹಡಪದ ಅಪ್ಪಣ್ಣ” ನವರು ಹನ್ನೆರಡನೇಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು “ಹಡಪದ” ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು. “ಅಂದು ಹಡಪದ ಸಮಾಜದವರು ಬೆಳಿಗ್ಗೆ ಎದರುಗಡೆ ಬಂದರೆ ಏನೋ ಆಗುತ್ತದೆ ಎಂಬ ಮೂಢ ನಂಬಿಕೆಯನ್ನು ಹೋಗಲಾಡಿಸುವುದಕ್ಕಾಗಿಯೆ ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ”. ಇವರ ಧರ್ಮಪತ್ನಿ ಲಿಂಗಮ್ಮನವರೂ ಸಹ ಮಹಾನ್ ವಚನಗಾರ್ತಿಯಾಗಿದ್ದರು. ಇವರ ಊರು ವಿಜಯಪುರ ಜಿಲ್ಲೆಯ ತಂಗಡಗಿಯಾಗಿರುತ್ತದೆ ಅಲ್ಲಿಯೆ ಇವರ ಸಮಾಧಿಯೂ ಸಹ ಇದೆ. ಇವರು ಸುಮಾರು ೨೫೦ಕ್ಕೂ ಹೆಚ್ಚು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ. ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್  ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ ಮಹೇಶ್ವರಪ್ಪ. ಸಮುದಾಯದ ಅಧ್ಯಕ್ಷರಾದ ವಿಜಯ್ ಕುಮಾರ್ .ಉಪ ತಹಶೀಲ್ದಾರ್ ಮಂಜ ನಂದ. ರಾಮಚಂದ್ರಪ್ಪ.ಕುಬೇರ ನಾಯ್ಕ್ ಮುಖಂಡರುಗಳಾದ

ಪ್ರಿಯದರ್ಶನ ವಿದ್ಯಾಸಂಸ್ಥೆಯ  ಕಾರ್ಯದರ್ಶಿ ರಾಜಶೇಖರ್. ಸೂರಗೊಂಡನಹಳ್ಳಿ ಕುಬೇರಪ್ಪ. ಬಗರ್ ಹುಕುಂ ಸಮಿತಿ ಸದಸ್ಯರಾದ ಕಾನನಕಟ್ಟೆ ತಿಪ್ಪೇಸ್ವಾಮಿ ಚಂದ್ರಪ್ಪ. ತಾಲೂಕು ಕಚೇರಿ ಸಿಬ್ಬಂದಿಗಳಾದ  ಕಾಂತರಾಜ್. ಮಲ್ಲಿಕಾರ್ಜುನ್ ನೇತ್ರಾವತಿ.ತ್ರಿವೇಣಿ.

ಜ್ಯೋತಿ.ಸಿರಿನಾ.ಶಶಿಕಲಾ.ಗಂಗಾಧರಪ್ಪ.ನಿಜಗುಣ. ಸೇರಿದಂತೆ ಎಲ್ಲಾ ತಾಲೂಕು ಕಚೇರಿ ಸಿಬ್ಬಂದಿಗಳು  ಹಾಜರಿದ್ದರು.