ಜಡೇಜಾ ಗಾಯಾಳು ಏಷ್ಯಾಕಪ್ ನಿಂದ ಹೊರಕ್ಕೆ, ಅಕ್ಷರ್ ತಂಡಕ್ಕೆ ಸೇರ್ಪಡೆ

ದುಬೈ, ಸೆ.2-ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಜಡೇಜ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಈ ಕುರಿತು ಮಾಹಿತಿ ನೀಡಿದೆ.
ಜಡೇಜಾ ಬದಲಿಗೆ ಎಡಗೈ ಸ್ಪಿನ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಪಾಕಿಸ್ತಾನ ಮತ್ತು ಹಾಂಕಾಂಗ್ ವಿರುದ್ಧ ಟೀಂ ಇಂಡಿಯಾ ಗೆಲುವಿನಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು.
ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಅವರನ್ನು ಕಾಡುತ್ತಿದೆ. ಹೀಗಿರುವಾಗ ಜಡೇಜಾ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಬಿಸಿಸಿಐ ಆಯ್ಕೆ ಮಾಡುವ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಹೀಗಾಗಿ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಸದ್ಯ ಜಡೇಜಾ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆ ಯಲ್ಲಿದ್ದಾರೆ ಎಂದು ತಿಳಿಸಿದೆ.