ಜನತಾದರ್ಶನ ಕಾರ್ಯಕ್ರಮ


ಲಕ್ಷ್ಮೇಶ್ವರ,ಫೆ.15: ತಾಲೂಕ ಪಂಚಾಯತಿಯ ಸಾಮಥ್ರ್ಯ ಸೌಧದಲ್ಲಿ ಬುಧವಾರ ತಾಲೂಕ ಮಟ್ಟದ ಜನತಾದರ್ಶನ ಕಾರ್ಯಕ್ರಮ ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಲಕ್ಷ್ಮೇಶ್ವರ್ ಪಟ್ಟಣದಲ್ಲಿನ ಕುಡಿಯುವ ನೀರಿನ ಗಂಭೀರ ಸಮಸ್ಯೆ ರಸ್ತೆಗಳು ಕೊಳವೆ ಬಾವಿಗಳ ದುರಸ್ತಿ ಸೇರಿದಂತೆ ಸಾರ್ವಜನಿಕರು ಭಾರತೀಯ ಕಿಸಾನ್ ಸಂಘದ ಹಾಗೂ ಸೋಮೇಶ್ವರ ನೂಲಿನ ಗಿರಣಿಗೆ ನೀಡಿರುವ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಕಡಿಮೆ ಬೆಲೆಯಲ್ಲಿ ಖರೀದಿಸಿ ಈಗ ಅದರಲ್ಲಿ ಸಾಗುವಳಿ ಮಾಡುತ್ತಿದ್ದಾರೆ ಎಂದು ದೂರಿದರು.
ಶಿಗ್ಲಿ ಗ್ರಾಮದಿಂದ ಬಂದಿದ್ದ ಸಾರ್ವಜನಿಕರು ವಿದ್ಯುತ್ ಮಗ್ಗಗಳಿಗೆ ಸೇರಿದಂತೆ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು ಅದರಂತೆ ಕಳೆದ ವರ್ಷ ಕಾಶಿ ಯಾತ್ರೆಗೆ ಹೋಗಿದ್ದ 31 ಜನ ಯಾತ್ರಾರ್ತಿಗಳಿಗೆ ಪೆÇ್ರೀತ್ಸಾಹ ಧನ ಇದುವರೆಗೂ ಬಿಡುಗಡೆಯಾಗಿಲ್ಲ ಎಂದು ಅದನ್ನು ಕೂಡಲೇ ನೀಡುವಂತೆ ಒತ್ತಾಯಿಸಿದರು.
ಲಕ್ಷ್ಮೇಶ್ವರ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಯ ಕುರಿತಂತೆ ಜಿಲ್ಲಾಧಿಕಾರಿಗಳು ತುಂಗಭದ್ರಾ ನದಿಯ ಪಾತ್ರದಲ್ಲಿನ ರೈತರು ಈ ನೀರನ್ನು ಬೆಳೆಗಳಿಗೆ ಬೆಳೆಸುತ್ತಿದ್ದು ಕೂಡಲೇ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪೆÇಲೀಸರ ನೆರವಿನೊಂದಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಬ್ಯಾಂಕ್ ಅಧಿಕಾರಿಗಳು ರೈತರಿಗೆ ಬರುತ್ತಿರುವ ಯೋಜನೆಗಳ ಸಣ್ಣಪುಟ್ಟ ಹಣವನ್ನು ಸಹ ರೈತರ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ ಬ್ಯಾಂಕಿನವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾದ ಟಾಕಪ ಸಾತಪೂತೆ ಅವರು ಜಿಲ್ಲಾಧಿಕಾರಿಗಳಿಗೆ ದೂರಿದರು.
ರೈತರಾದ ಬಸವಣ್ಣಪ್ಪ ಉಮಚಗಿ ಹಾಗೂ ಇನ್ನಿತರೆ ರೈತರು ಈ ಹಿಂದೆ 1984 ರಲ್ಲಿ ಖರೀದಿಸಿರುವ ಜಮೀನು ಅತ್ಯಂತ ಕಡಿಮೆ ಬೆಲೆಯಾಗಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ನೀಡಿರುವ ಜಮೀನನ್ನು ಕಾನೂನುಬಾಹಿರವಾಗಿ ಉಳಿಮೆ ಮಾಡಿಕೊಳ್ಳುತ್ತಿದ್ದಾರೆ ಎಂದು ಇದಕ್ಕೆ ಸಂಬಂಧಪಟ್ಟಂತೆ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯಿಸಿದರು.
ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತು 41ಕ್ಕೂ ಹೆಚ್ಚು ಅರ್ಜಿಗಳು ಸ್ವೀಕಾರವಾದವು ಜಿಲ್ಲಾಧಿಕಾರಿಗಳು ಈ ಎಲ್ಲ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಿ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸುವದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು ಕಂದಾಯ ಇಲಾಖೆಯ ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಅಮಾಸಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮ ರ ಇದ್ದರು.