ಜನತಾ ಬಜಾರ್ ನಲ್ಲಿ ಕನಕ ಜಯಂತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ನ.12: ನಗರದ ಜನತಾ ಬಜಾರ್ ಕಚೇರಿಯಲ್ಲಿ ನಿನ್ನೆ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಜನತಾ ಬಜಾರ್ ನ ಅಧ್ಯಕ್ಷ ಜಿ.ನೀಲಕಂಠಪ್ಪ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಬರಮರೆಡ್ಡಿ, ಸಹಕಾರ ಸಂಘಗಳ ಉಪನಿಬಂಧಕರುಗಳಾದ ಕೇಸರಿಮಠ, ವೀರಭದ್ರಯ್ಯಸ್ವಾಮಿ ಹಾಗೂ ಸಿಬ್ಬಂದಿವರ್ಗ ಇದ್ದರು.