ಜನಪರ ಕಾರ್ಯಗಳೇ ಶಾಸಕ ಸುಬ್ಬಾರೆಡ್ಡಿಗೆ ಶ್ರೀರಕ್ಷೆ

ಬಾಗೇಪಲ್ಲಿ, ಮೇ.೭- ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಜನಪರ ಕಾರ್ಯಗಳೇ ಅವರನ್ನು ರಾಜಕೀಯದಲ್ಲಿ ಇನ್ನಷ್ಟು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಕಾರ್ಯದರ್ಶಿ ಅನ್ಸರ್ ತಿಳಿಸಿದರು.
ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಜನ್ಮದಿನದ ಪ್ರಯುಕ್ತ ಎಸ್.ಎನ್. ಸುಬ್ಬಾರೆಡ್ಡಿ ಅಭಿಮಾನಿಗಳು ಪಟ್ಟಣದ ಗೂಳೂರು ಸರ್ಕಲ್‌ನಲ್ಲಿ ಕೇಕ್ ಕತ್ತರಿಸಿ, ಅನ್ನದಾನ ಕಾರ್ಯಕ್ರಮ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಸ್.ಎನ್. ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ದಶಕಗಳಿಂದ ದೀನ ದಲಿತರಿಗೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಕಳೆದ ೨೫ ವರ್ಷಗಳಿಂದ ಸಮಾಜ ಸೇವೆ ಮಾಡುತ್ತಿದ್ದಾರೆ. ಸದಾ ಬಡಪರ ಕಾಳಜಿ ವಹಿಸಿರುವ ಸುಬ್ಬಾರೆಡ್ಡಿ ರವರು ೩ನೇ ಬಾರಿ ಶಾಕರಾಗಿ ಆಯ್ಕೆಯಾಗಿ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಇತಿಹಾಸ ಸೃಷ್ಠಿಸಿದ್ದಾರೆ. ಸುಬ್ಬಾರೆಡ್ಡಿ ರವರ ಮೇಲೆ ಜನರು ಇಟ್ಟಿರುವ ನಂಬಿಕೆಯೇ ಅವರ ಹ್ಯಾಟ್ರಿಕ್ ಗೆಲುವಿಗೆ ಕಾರಣ ಅವರ ಜನ್ಮದಿನದ ಪ್ರಯುಕ್ತ ಕೇಕ್ ಕತ್ತರಿಸಿ ಅನ್ನದಾನ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಸಂತಸ ತಂದಿದೆ. ಬಾಗೇಪಲ್ಲಿ ಕ್ಷೇತ್ರದಲ್ಲಿ ಸುಬ್ಬಾರೆಡ್ಡಿ ರವರು ಬಡಜನರಿಗೆ ವಿದ್ಯಾಭ್ಯಾಸ, ಆರೋಗ್ಯ, ಸಾಮೂಹಿಕ ವಿವಾಹದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಿರಂತರವಾಗಿ ಜನರ ಸೇವೆ ಮಾಡುತ್ತಿದ್ದಾರೆ. ಶಾಸಕರು ಸಚಿವರಾಗಿ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಕೆಲಸಗಳು ನಡೆದು ಮಾದರಿ ಕ್ಷೇತ್ರವನ್ನಾಗಿ ಮಾಡಲಿ. ಇನ್ನಷ್ಟು ಸಮಾಜ ಸೇವೆ ಮಾಡಿ ಜನರಿಗೆ ಒಳ್ಳೆಯದು ಮಾಡಲಿ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಷಬ್ಬೀರ್, ಮುಖಂಡರಾದ ಮಂಜುನಾಥರೆಡ್ಡಿ, ವಸೀಂ, ಕ್ರಿಕೆಟ್ ಮೂರ್ತಿ, ಅಕ್ರಂ, ಫೈರೋಜ್, ಚೋಟು, ಹೈದರಾಲಿ, ಶ್ರೀನಿವಾಸ್ ಸೇರಿದಂತೆ ಮತ್ತಿತರೇ ಮುಖಂಡರು ಹಾಜರಿದ್ದರು.