ಜನಪ್ರತಿನಿಧಿಗಳಿಂದ ವಾರ್ ರೂಂ ಭೇಟಿ-ಪರಿಶೀಲನೆ

ದಾವಣಗೆರೆ ಮೇ.೩೦; ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಹಾಗೂ ಜಗಳೂರು ಕ್ಷೇತ್ರದ ಶಾಸಕರಾದ ಎಸ್.ವಿ.ರಾಮಚಂದ್ರಪ್ಪನವರು ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ವಾರ್‌ರೂಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಡಿಹೆದ್‌ಓ ಡಾ.ನಾಗರಾಜ್ ಇತರೆ ಅಧಿಕಾರಿಗಳು ಹಾಜರಿದ್ದರು.