ಜನರನ್ನು ಭಯ ಪಡಿಸಬೇಡಿ

ವಾಡಿ:ಎ.29: ಚಿತ್ತಾಪೂರ ಶಾಸಕ ಪ್ರಿಯಾಂಕ್ ಖರ್ಗೆಯವರು ಏ.26 ರಂದು ಸಂಸದರಿಗೆ ಮಾತನಾಡಿರುವ ರೀತಿ ಜನರ ದಾರಿ ತಪ್ಪಿಸುವ ಕೆಲಸವಾಗಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ ಇಂತಹ ಹೇಳಿಕೆಯನ್ನು ಖಂಡಿಸುತ್ತೆವೆ . ಎಂದು ಬಿಜೆಪಿ ಹಿರಿಯ ಮುಖಂಡ ಶಿವರಾಮ ಪವಾರ ಹೇಳಿದರು.

ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಜಿಲ್ಲಾ ಟೀಮ್ ಜೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದೆ. ಸಣ್ಣಪುಟ್ಟ ಸಮಸ್ಯೆ ಬಿಟ್ಟರೆ ಬೇರೆ ಯಾವುದೇ ಸಮಸ್ಯೆಯಿಲ್ಲ. ಜೀಮ್ಸ್ ಆಸ್ಪತ್ರೆ ಕುರಿತು ನೀಡಿದ ಹೇಳಿಕೆ ನಿರಾಧಾರವಾಗಿದೆ. ಜನರನ್ನು ಭಯ ಪಡಿಸುವ ಕೆಲಸ ಮಾಡಬೇಡಿ. ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ. ಮುಂದಿನ ಚುನಾವಣಾ ಸೋಲಿನ ಭೀತಿಯಿಂದ ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿ ತಕ್ಷಣವೇ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಬಿಜೆಪಿ ಮುಖಂಡ ವಿಠ್ಠಲ್ ನಾಯಕ, ಗಿರಿಮಲ್ಲಪ್ಪ ಕಟ್ಟಿಮನಿ ಇದ್ದರು.