ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿ

ಹುಮನಾಬಾದ್:ಎ.28: ಪಟ್ಟಣದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಸೋಂಕಿತರಿಗೆ ಯಾವುದೇ ರೀತಿಯ ಸಮಸ್ಯಗಳಾಗದಂತೆ ತಾಲ್ಲೂಕು ಆಡಳಿತ ಸ್ತೂಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಪೊಲೀಸ್ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲಲ್‌ಇ ನಡೆದ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಬೇಕು. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಲು ಪ್ರೇರೆಪಿಸಬೇಕು. ಜನದಟ್ಟಣೆ ಉಂಟಾಗುವ ಕಾರ್ಯಕ್ರಮಗಳನ್ನು ಆಯೋಜಿಸದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಮಾತನಾಡಿದರು.