ಕಲಬುರಗಿ,ಜು.21: ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಅಪಘಾತ ತಡೆಗಟ್ಟಲು ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯ ತರನ್ನಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರದಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪಘಾತ ಪ್ರಮಾಣವನ್ನು ತಡೆಗಟ್ಟುವ ಸಲುವಾಗಿ ಸಾರಿಗೆ ಮತ್ತು ಪೆÇಲೀಸ್ ಇಲಾಖೆಯಿಂದ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಅವರು ಮಾತನಾಡಿದರು.
ರಸ್ತೆ ಅಪಘಾತ ಸಂಭವಿಸಿದ ತಕ್ಷಣ ಅಪಘಾತಕ್ಕೊಳಗಾದ ಗಾಯಾಳುಗಳನ್ನು ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಒದಗಿಸಲು ಸೂಕ್ತ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿದಲ್ಲಿ ಹೆಚ್ಚಿನ ಪ್ರಾಣ ಹಾನಿ ತಡೆಯಬಹುದಾಗಿದೆ. ಜಿಲ್ಲೆಯಲ್ಲಿ ಒಟ್ಟು 216 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ರಸ್ತೆ ಸಂಚಾರಿ ಚಿಹ್ನೆಗಳು, ರಸ್ತೆಯ ಬದಿಯ ಟ್ರಾಫಿಕ್ ರೆಗ್ಯೂಲೇಟರಿ ಲೈಟ್‍ಗಳು ಸರಿಯಾಗಿ ನಿರ್ವಹಣೆಯಾಗುತ್ತಿರುವ ಬಗ್ಗೆ ಆಗಾಗ ಪೆÇಲೀಸ್ ಮತ್ತು ಜೆಸ್ಕಾಂ ಸಿಬ್ಬಂದಿಗಳು ಪರಿಶೀಲಿಸಬೇಕು.ಅಗತ್ಯವಿದ್ದ ಕಡೆ ಬ್ಯಾರಿಕೇಡ್ ಹಾಕಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಫಘಾತಕ್ಕೆ ಕಾರಣ, ಅಪಘಾತಕ್ಕೀಡಾದವರ ವಿಳಾಸ ವಿವರ ಇನ್ನೀತರ ಅವಶ್ಯಕ ಮಾಹಿತಿಯನ್ನು ಪೆÇಲೀಸ್ ಇಲಾಖೆ ಸಂಗ್ರಹಿಸಿ ಸಂಬಂಧಪಟ್ಟ ಇಲಾಖೆಗೆ ಒದಗಿಸಬೇಕು. ಅಪಘಾತವಾದ ಕೂಡಲೇ ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಾಗೂ ತುರ್ತು ಸಹಾಯಕ್ಕಾಗಿ ಪೆÇಲೀಸರ ನೆರವು ಪಡೆಯಲು ಪ್ರಯಾಣಿಕ ಸ್ನೇಹಿ ತಂತ್ರಾಂಶ (ಆ್ಯಪ್) ಅಭಿವೃದ್ಧಿ ಪಡಿಸಬೇಕೆಂದರು.
ಹದಿನೆಂಟು ಏಜೆನ್ಸಿಗಳ ಪಿ.ಪಿ.ಟಿ. ತಯಾರಿಸಬೇಕೆಂದರು. ಪ್ರತಿ ದಿನದ ಅಪಘಾತ ವಲಯಗಳನ್ನು ಗುರುತಿಸಿ, ಅದಕ್ಕೆ ಬೇಕಾದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ರಸ್ತೆ ಸುರಕ್ಷಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜಮಿಕರಿಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಈ ದಿಸೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರದೊಂದಿಗೆ ಸಭೆ ನಡೆಸುವ ನಿಟ್ಟಿನಲ್ಲಿ ಚರ್ಚೆ ಮಾಡಲಾಯಿತು.
ನಗರ ಪೆÇೀಲಿಸ್ ಆಯುಕ್ತರಾದ ಚೇತನ್ ಆರ್ ಅವರು ಮಾತನಾಡಿ, ಐದುನೂರು ಮೀಟರಗಳ ಒಳಗಡೆ ಇರುವ ಧಾಬಾಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲಿ ಹೆಚ್ಚಿಗೆ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದೇ ಕೆಲಸ ನಿರ್ವಹಿಸಬೇಕೆಂದರು.
ಇದೇ ಸಂದರ್ಭದಲ್ಲಿ ಆಟೋರಿಕ್ಷಾ ನಿಲ್ದಾಣ ಬಗ್ಗೆ ಬೇಡಿಕೆ ಹಾಗೂ ಆಟೋರಿಕ್ಷಾ ಕ್ಯಾಬ್ ನಿಲ್ದಾಣಗಳ ಸಾರಿಗೆ ಬಸ್‍ಗಳ ಬಗ್ಗೆ ಚರ್ಚಿಸಲಾಯಿತು.
ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ಹಾಗೂ ಅಪಘಾತ ತಡೆಯುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆ ಸಭೆಗೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಇಶಾ ಪಂತ್, ಡಿಸಿಪಿ ಶ್ರೀನಿವಾಸ ಅಡ್ಡೂರ, ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ ಪಾಟೀಲ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಗಜಾನಂದ ಬಾಳೆ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ, ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಅಧಿಕಾರಿ ನೂರ್ ಮಹ್ಮದ್ ಭಾಷಾ ಸೇರಿದಂತೆ ರಸ್ತೆ ಸುರಕ್ಷಾ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.