ಜನರ ಅಲೆದಾಟ ನಡೆಸುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ: ಡಿವೈಎಸ್‌ಪಿ ವಿಜಯಪ್ರಸಾದ್

ಸುಳ್ಯದಲ್ಲಿ ಜಾಗೃತಿ ಅರಿವು ಸಪ್ತಾಹ

ಸುಳ್ಯ, ಅ.೩೧- ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಆಗಬೇಕು. ತಪ್ಪು ಮಾಹಿತಿ ನೀಡಿ ಕಚೇರಿಗಳಿಗೆ ಜನರ ಅಲೆದಾಟ ನಡೆಸುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ವಿಜಯಪ್ರಸಾದ್ ಹೇಳಿದರು.

ಸುಳ್ಯ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಲೋಕಾಯುಕ್ತ ಮಂಗಳೂರು ಇದರ ವತಿಯಿಂದ ನಡೆದ ಜಾಗೃತಿ ಅರಿವು ಸಪ್ತಾಹ-೨೦೨೦ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರದಿಂದ ಜನರಿಗೆ ಸಿಗುವಂತಹ ಸೌಲಭ್ಯಗಳನ್ನು ನೀಡಬೇಕು. ಅವರು ನೀಡುವಂತಹ ಅರ್ಜಿಗಳನ್ನು ತಿರಸ್ಕರಿಸುವ ಕೆಲಸ ಅಧಿಕಾರಿಗಳು ಮಾಡಬಾರದು. ಪಂಚಾಯತಿ ಮಟ್ಟದಲ್ಲಿ ಸರಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವಂತಹ ಕೆಲಸ ಆಗಬೇಕು. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಬೇಕು. ಯಾರ ಒತ್ತಡ, ಒತ್ತಾಯಕ್ಕೆ ಮಣಿಯದೇ ಕೆಲಸ ಮಾಡಿ. ಕಚೇರಿಗಳಿಗೆ ವಯಸ್ಕರು, ಮಹಿಳೆಯರು ಬಂದರೆ ಪ್ರಾತಿನಿಧ್ಯ ನೀಡಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವೀ ಕಾಂಚೋಡು, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್, ಲೋಕಾಯುಕ್ತ ಎಸ್.ಐ. ಅಮಾನುಲ್ಲಾ ಉಪಸ್ಥಿತರಿದ್ದರು.