ಜನರ ಆಶೋತ್ತರ ಈಡೇರಿಸಲು ಬದ್ಧ: ಮೋದಿ

ಪಾಟ್ನಾ. ನವೆಂಬರ್ ೩. ಕಳೆದ ಆಡಳಿತಾವಧಿಯಲ್ಲಿ ಬಿಹಾರದ ಜನತೆಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಿದೆ. ಮತ್ತೆ ಮತ್ತೆ ಅಧಿಕಾರಕ್ಕೆ ಬರಲು ಜನ ಆಶೀರ್ವಾದ ಮಾಡಲಿದ್ದಾರೆ. ಅವರೆಲ್ಲ ರೀತಿಯ ಆಶೋತ್ತರಗಳನ್ನು ಈಡೇರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಬಿಹಾರ ವಿಧಾನ ಸಭೆಯ ಮೂರನೇ ಹಂತದ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಬಿಹಾರದ ಫೋರ್ಬಗಂಜ್ ಏರ್ಪಡಿಸಿದ್ದ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಕಳೆದ ದಶಕದಲ್ಲಿ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ಭರವಸೆಯನ್ನು ನೀಡಲಾಗಿತ್ತು. ಈ ದಶಕದಲ್ಲಿ ಎಲ್ಲಾ ಗ್ರಾಮಗಳಿಗೆ ಎಲ್ಲಾ ಕಾಲಕ್ಕೂ ನಿರಂತರ ವಿದ್ಯುತ್ ಪೂರೈಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಬಿಹಾರದ ಜನರ ಮೂಲಭೂತ ಸೌಕರ್ಯಗಳನ್ನು ಈಡೇರಿಸಿರುವಂತೆ ಮುಂಬರುವ ದಿನಗಳಲ್ಲಿ ಅವರ ಎಲ್ಲಾ ಆಶೋತ್ತರಗಳನ್ನು ಈಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಬಿಹಾರದ ಪ್ರತಿಯೊಬ್ಬ ಮಹಿಳೆಯು ಎನ್ ಡಿಎ ತನ್ನ ಮೈತ್ರಿಕೂಟ ಪರವಾಗಿ ಮತ ಚಲಾಯಿಸಲು ನಿರ್ಧರಿಸಿದ್ದಾರೆ ಏಕೆಂದರೆ ಈ ಸರ್ಕಾರ ಅವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ ಅವರು, ಎನ್‌ಡಿಎ ಬಡವರಿಗೆ ನಿಜವಾದ ಅರ್ಥದಲ್ಲಿ ಮತದಾನದ ಹಕ್ಕನ್ನು ನೀಡಿದೆ. ಸಮಾಜದ ಎಲ್ಲ ವರ್ಗದ ಜನರು ತಮ್ಮ ಮೆಚ್ಚಿನ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಹಕ್ಕು ಹೊಂದಿದ್ದಾರೆ ಎಂದರು.
ಬಿಹಾರದ ಎಲ್ಲಾ ಅಕ್ಕತಂಗಿಯರು ತಾಯಂದಿರು ಮೈತ್ರಿಕೂಟ ಪರವಾಗಿ ಬೆಂಬಲಕ್ಕೆ ನಿಂತಿದ್ದಾರೆ.ಅಲ್ಲದೆ ಮೋದಿಯವರಿಗೆ ಬೆಂಬಲ ಮತ್ತು ಮತ ನೀಡಬೇಕೆಂದು ತೀರ್ಮಾನಿಸಿದ್ದಾರೆ. ಕಾರಣ ಇಲ್ಲಿನ ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಪಾರವಾಗಿ ಶ್ರಮಿಸಿದೆ ಎಂದು ಹೇಳಿದರು.
ಬಿಹಾರದ ವಿವಿಧ ಕಡೆಗಳಲ್ಲಿ ಎಂದು ಚುನಾವಣಾ ಪ್ರಚಾರ ನಡೆಸುವ ಮೂಲಕ ಮೂರನೆ ಹಂತದ ಮತದಾನದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿ ತಮ್ಮ ಪ್ರಚಾರ ಕಾರ್ಯವನ್ನು ಪೂರ್ಣಗೊಳಿಸಲಿದ್ದಾರೆ.
ಇದಕ್ಕೂ ಮುನ್ನ ಟ್ವೀಟ್ ಸಂದೇಶದಲ್ಲಿ ಪ್ರಧಾನಿಯವರು, ಎರಡನೇ ಹಂತದ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಪಾಲ್ಗೊಂಡu ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರೂ ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾತಂತ್ರ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ಆ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದೆ ಮತದಾರರಿಗೆ ಮನವಿ ಮಾಡಿದ್ದಾರೆ.