ಜನರ ನಿರೀಕ್ಷೆಗೆ ತಕ್ಕ ರೀತಿಯಲ್ಲಿ ಮಲ್ಲಿಕಾರ್ಜುನ್ ಕೆಲಸ ಮಾಡುತ್ತಾರೆ

ದಾವಣಗೆರೆ.ಮೇ.೧೯; ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಾರೆ ಎಂದು ಶಾಮನೂರು ಶಿವಶಂಕರಪ್ಪರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲಾ ಖಾದಿಮೂಲ್  ಹೂಜ್ವಜ್  ಕಮಿಟಿ ವತಿಯಿಂದ ಹಜ್ ಯಾತ್ರಿಗಳಿಗೆ ಚುಚ್ಚುಮದ್ದು ಹಾಕಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೂ ಜನರ ನಿರೀಕ್ಷೆಗೆ ತಕ್ಕ ರೀತಿಯಲ್ಲಿ ಮಲ್ಲಿಕಾರ್ಜುನ್ ಕಾರ್ಯ ನಿರ್ವಹಿಸುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎಸ್‌ ಎಸ್ ಹಾಗೂ ಎಸ್ ಎಸ್ ಎಂ ಗೆಲ್ಲುವ ವಿಶ್ವಾಸ ಇತ್ತು ಎಂದು ತಿಳಿಸಿದರು.ದಾವಣಗೆರೆ ಜನರಿಗೆ ಆರೋಗ್ಯ ತಪಾಸಣೆ ಹಾಗೂ ಹಜ್ ಯಾತ್ರಿಗಳಿಗೆ ಚುಚ್ಚುಮದ್ದು ನೀಡಬೇಕೆಂಬ ಆಸೆ ಇತ್ತು. ಯಾವಾಗಲೂ ನಿರೀಕ್ಷೆ ಜಾಸ್ತಿ ಇರಬೇಕು. ನಮ್ಮ‌ ಕೆಲಸ, ಪ್ರಚಾರ ಜಾಸ್ತಿ ಇದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರದ ಅಲೆ ಬ್ರೇಕ್ ಮಾಡಿದ್ದೇವೆ ಎಂಬ ವಿಶ್ವಾಸ ಇತ್ತು. ದಾವಣಗೆರೆಯ ವಿದ್ಯಾ‌ನಗರ ಸೇರಿದಂತೆ ಕೆಲವೆಡೆ ಮತಗಳು ಕಡಿಮೆ ಬಿದ್ದಿದ್ದರೂ ಮಲ್ಲಿಕಾರ್ಜುನ್ ಅವರೇ ನಮ್ಮ ನಾಯಕರು ಎಂಬ ನಂಬಿಕೆ ಜನರಲ್ಲಿದೆ. ಜನರಿಗೆ ಶುಭಾಶಯ ಕೋರಲು ಸಿಕ್ಕಿಲ್ಲ. ಮನೆಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಿಲ್ಲ. ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವ ಛಾತಿ ಅಪ್ಪಾಜಿ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗಿದೆ. ಇಂಥದ್ದೇ ಖಾತೆ ಬೇಕು ಎಂದು ಕೇಳುವುದಿಲ್ಲ ಎಂಬುದು ನನ್ನ ಭಾವನೆ ಎಂದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಅಯೂಬ್ ಪೈಲ್ವಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.