ಜನರ ರಕ್ಷಕನಂತೆ ಕರ್ತವ್ಯ ನಿರ್ವಹಿಸುತ್ತೇನೆ

ಕೋಲಾರ, ಮೇ.೫- ನಾನು ಒಬ್ಬ ರೈತನ ಮಗ ನನಗೆ ಗನ್ ಮ್ಯಾನ್‌ಗಳನ್ನಿಟ್ಟುಕೊಂಡು ಚುನಾವಣೆ ಮಾಡುವ ಪರಿಸ್ಥಿತಿ ಬಂದಿಲ್ಲ. ಕ್ಷೇತ್ರದ ಮತದಾರರಿಗೆ ನಾನು ಗನ್‌ಮ್ಯಾನ್ ಆಗಿ ಕೆಲಸ ಮಾಡುತ್ತೇನೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ತಿಳಿಸಿದರು.
ನಗರದ ಸಂತೆ ಮೈದಾನದಲ್ಲಿ ಗುರುವಾರ ಜೆಡಿಎಸ್ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿ ಮಾತನಾಡಿದ ಅವರು ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗನ್ ಮ್ಯಾನ್ ಗಳನ್ನಿಟ್ಟುಕೊಂಡು ಓಡುಡುತ್ತಿದ್ದಾರೆ ಅಂತಹ ಪರಿಸ್ಥಿತಿ ನನಗೆ ಬಂದಿಲ್ಲ. ಗನ್ ಮ್ಯಾನ್ ಗಳನ್ನು ಇಟ್ಟುಕೊಂಡು ಓಡಾಡುತ್ತಿರುವವರ ಹಿನ್ನೆಲೆ ಏನೆಂಬುದನ್ನು ಜನಕ್ಕೆ ಗೊತ್ತಿದೆ ನಾನು ನಿಮ್ಮ ಮನೆಯ ಮಗನ ರೀತಿಯಲ್ಲಿ ನಿಮ್ಮ ಮುಂದೆ ಯಾವಾಗಲೂ ಸಿಗುವ ವ್ಯಕ್ತಿ ನಾನು ಮೊದಲಿನಿಂದಲೂ ಜನರೊಂದಿಗೆ ಬೆರೆತು ಅವರ ಕಷ್ಟಗಳನ್ನು ನೋಡಿಕೊಂಡು ಬೆಳೆದವನು ಈ ಬಾರಿ ಚುನಾವಣೆಯಲ್ಲಿ ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.
ಕರೋನಾ ಸಮಯದಲ್ಲಿ ನಾನು ಮತ್ತು ನಮ್ಮ ತಂಡ ಸೋಂಕಿತರ ಹಾಗೂ ರೈತರ ಮನೆ ಬಾಗಿಲಿಗೆ ಹೋಗಿ ಅವರ ಕಷ್ಟಗಳಲ್ಲಿ ಭಾಗಿಯಾಗಿದ್ದೇನೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ನವರು ಒಂದು ದಿನವಾದರೂ ಜನರ ಕಷ್ಟ ಕೇಳಿಲಿಲ್ಲ ಇದೀಗ ಚುನಾವಣೆ ಬಂದಿದೆ ಎಂದು ಹಳ್ಳಿಗಳ ಕಡೆ ಮುಖ ಮಾಡಿದ್ದಾರೆ. ಇಂತಹವರಿಗೆ ಕ್ಷೇತ್ರದ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು
ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತನ್ನ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಜಾತಿಗಳನ್ನು ಮೇಲೆ ಸವಾರಿ ಮಾಡುತ್ತಿದೆ ಚುನಾವಣೆಯ ಸಂದರ್ಭದಲ್ಲಿ ಕೋಮುಭಾವನೆಗಳ ವಿಚಾರಗಳನ್ನು ತಂದಿದ್ದಾರೆ ಜೆಡಿಎಸ್ ಪಕ್ಷ ಜನಸಾಮಾನ್ಯರ ಬದುಕಿಗೆ ಆಸರೆಯಾಗುವ ಯೋಜನೆಗಳನ್ನು ರೂಪಿಸಲಾಗಿದೆ ಅದರಿಂದಾಗಿ ಒಂದು ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯಾದ ಉಚಿತ ಶಿಕ್ಷಣ, ಆರೋಗ್ಯ, ವಸತಿ, ಕೃಷಿ, ಉದ್ಯೋಗ ಅಧಿಕಾರಕ್ಕೆ ಬಂದ ೨೪ ಗಂಟೆ ಒಳಗೆ ಮಹಿಳಾ ಸ್ವ ಸಹಾಯ ಸಂಘಗಳ ಸಾಲ ಮನ್ನಾ ಮಾಡುವರು ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ೬ ಸಾವಿರ ಪಿಂಚಣಿ ಸೇರಿದಂತೆ ಪಂಚರತ್ನ ಯೋಜನೆ ಜಾರಿಗೆ ತರಲಾಗುವುದು, ಆದ್ದರಿಂದ ರೈತರು, ಬಡವರು, ದಲಿತರ ಸಬಲೀಕರಣಕ್ಕಾಗಿ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಜೆಡಿಎಸ್ ಮುಖಂಡರಾದ ಜೆಟ್ ಅಶೋಕ್, ಸುಧಾಕರ್, ಬಲಿಜ ಸಂಘದ ಅಶೋಕ್, ಎಪಿಎಂಸಿ ಪುಟ್ಟುರಾಜು, ಗಂಗಮ್ಮನಪಾಳ್ಯ ಶಿವು, ರೋಜಾ ಮುಂತಾದವರು ಇದ್ದರು.