ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಪುತ್ರ ಚಿದಾನಂದ ಸವದಿ

ಅಥಣಿ :ಜು.17: ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದರಿಂದ್ದ ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರ ಚಿದಾನಂದ ಸವದಿ ಅವರು ಬೆಳಗ್ಗೆ ತಮ್ಮ ವಿವಿಧ ಸಮಸ್ಯೆಗಳ ಪರಿಹಾರದ ಕುರಿತು ಕ್ಷೇತ್ರದ ಜನರು ಭೇಟಿ ಮಾಡಲು ಆಗಮಿಸಿದ್ದ ಸಾರ್ವಜನಿಕರ ವಿವಿಧ ಸಮಸ್ಯೆಗಳು ಹಾಗೂ ಕುಂದು ಕೊರತೆಗಳ ಬಗ್ಗೆ ಕುರಿತು ಚರ್ಚಿಸಿ, ಸಂಬಂಧಪಟ್ಟವರೊಂದಿಗೆ ಮಾತನಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದರು.
ಶಾಸಕ ಲಕ್ಷ್ಮಣ ಸವದಿ ಅವರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಜನ ಮೆಚ್ಚುಗೆಗೆ ಪಾತ್ರವಾಯಿತು,