ಜನರ ಸಮಸ್ಯೆಗೆ ಸ್ಪಂದಿಸುವೆ: ಮಹಾರುದ್ರಸ್ವಾಮಿ

ಚೇಳೂರು, ಜ. ೯- ಗುಬ್ಬಿ ತಾಲ್ಲೂಕಿನ ತೇವಡೆಹಳ್ಳಿ ಕ್ಷೇತ್ರದಿಂದ ಸಾಮಾನ್ಯ ಅಭ್ಯರ್ಥಿಯಾಗಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬೆಜೆಪಿ ಬೆಂಬಲಿತ ಅಭ್ಯರ್ಥಿ ಮಹಾರುದ್ರಸ್ವಾಮಿ ಗೆಲುವಿನ ಮೂಲಕ ಹೊಸಕೆರೆ ಗ್ರಾಮ ಪಂಚಾಯ್ತಿಗೆ ಆಯ್ಕೆಯಾಗಿದ್ದಾರೆ.
ನೂತನ ಗ್ರಾಮ ಪಂಚಾಯ್ತಿ ಸದಸ್ಯ ಮಹಾರುದ್ರಸ್ವಾಮಿ ಮಾತನಾಡಿ, ಹೊಸಕೆರೆ ಗ್ರಾಮ ಪಂಚಾಯ್ತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ನಾವು ಸಿದ್ದರಾಗಿದ್ದು, ಈ ಭಾಗದ ಜನರ ಹಲವಾರು ಸಮಸ್ಯೆಗಳಾದ ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿದೀಪ, ವಸತಿ ಯೋಜನೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕಿಳಿದ ನನ್ನ ಗೆಲುವಿಗೆ ಸಹಕರಿಸಿದ ಮತದಾರರಿಗೆ ನಾನು ಅಭಾರಿಯಾಗಿದ್ದು, ಆಯ್ಕೆ ಮಾಡಿದ ಎಲ್ಲ ಮತದಾರರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.