ಜನವರಿ 31 ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ರದ್ದು

ನವದೆಹಲಿ, ಡಿ.9- ದೇಶದಲ್ಲಿ ಕೊರೊನಾನಾ ಸಂಖ್ಯೆ ಹೆಚ್ಚಳ ಮತ್ತು ಹೊಸ ಮಾದರಿಯ ರೂಪಾಂತರ ಓಮಿಕ್ರಾನ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜನವರಿ 31ರ ತನಕ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದು ಮಾಡಲಾಗಿದೆ.

ಎಲ್ಲಾ ಅಂತರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರವನ್ನು ಬಂದ್ ಅವಧಿಯನ್ನು 2012 ಜನವರಿ 31ರ ತನಕ ಎತ್ತರದ ವಿಸ್ತರಣೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಈ ಸಂಬಂಧ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ – ಡಿಜಿಸಿಎ ಆದೇಶ ಹೊರಡಿಸಿದೆ. ಇದರಿಂದಾಗಿ ಅಂತರಾಷ್ಟ್ರೀಯ ಪ್ರಯಾಣಿಕರು ದೇಶಕ್ಕೆ ಬರಲು ಇನ್ನೂ ಕಾಯುವುದು ಅನಿವಾರ್ಯವಾಗಿದೆ.

ಅಂತರಾಷ್ಟ್ರೀಯ ಸರಕು ಸಾಗಣೆಯ ವಿಮಾನಗಳಿಗೆ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ರೂಪಾಂತರ ಕಾಣಿಸಿಕೊಂಡು ಆ ನಂತರ ಜಗತ್ತಿನ ವಿವಿಧ ದೇಶಗಳಲ್ಲಿ ಓಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದಕ್ಕೂ ಮುನ್ನ ನವಂಬರ್ 26 ರಿಂದ ಡಿಸೆಂಬರ್ 15ರಂದು ಅಂತರಾಷ್ಟ್ರೀಯ ವಿಮಾನ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನವರಿ 31ರ ತನಕ ಅಂತರಾಷ್ಟ್ರೀಯ ವಿಮಾನ ಸಂಚಾರ ವನ್ನು ಬಂದ್ ಮಾಡಿದೆ.