ಜನವಿರೋಧಿ ಬಜೇಟ್

ಬೀದರ:ಜು.8:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನ ವಿರೋಧಿ ಬಜೆಟ್ ಆಗಿದ್ದು, ಕಲ್ಯಾಣ-ಕರ್ನಾಟಕ ಭಾಗವನ್ನು ಬಜೆಟ್‍ನಲ್ಲಿ ಕಡೆಗಣಿಸಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಪ್ರದೀಪ ವಾತಾಡೆ ಟಿಕಿಸಿದ್ದಾರೆ.

ಬಜೆಟ್ ಕುರಿತು ಪ್ರಕಟಣೆ ಹೊರಡಿಸಿದ ಅವರು, ಜನ ವಿರೋಧಿ ಕಾಂಗ್ರೆಸ್ ಸರ್ಕಾರ ನಗರಗಳಿಗೆ ಹೆಚ್ಚು ಒತ್ತು ನೀಡಿದ್ದು ಗ್ರಾಮಗಳ ಅಭಿವೃದ್ಧಿ ಕಡೆಗೆ ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಬಜೆಟ್ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಬೇಕು ಎಂದಿದ್ದಾರೆ. ಆದರೆ ಕೆಲವು ಗ್ಯಾರಂಟಿಗಳು ಇನ್ನೂ ಜಾರಿಯಾಗಿಲ್ಲ. ಆದರೆ ಈ ವರ್ಷಕ್ಕೆ ಕೇವಲ 20 ರಿಂದ 22 ಸಾವಿರ ಕೋಟಿ ರೂ ಸಾಕು. ಈ ನಿಟ್ಟಿನಲ್ಲಿ ಹೆಚ್ಚಿನ ತೆರಿಗೆ ಹಾಗೂ ಸಾಲ ಪಡೆದುಕೊಳ್ಳುವ ಅಗತ್ಯ ಇರಲಿಲ್ಲ ಎಂದರು. ಒಟ್ಟಾರೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಮತಷ್ಟು ತೆರಿಗೆ ಹೊರೆಯ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಯುವ ಮುಖಂq ಪ್ರದೀಪ ವಾತಡೆ ತಿಳಿಸಿದ್ದಾರೆ.