ಜನವಿರೋಧಿ ಬಿಜೆಪಿ ಕಿತ್ತೊಗೆಯಲು ನಿರ್ಧಾರ: ಖಂಡ್ರೆ

ಬೀದರ:ಮಾ.7:ಪಟ್ಟಣದ ಬಿಕೆಐಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ ಸರ್ಕಾರ ಬಂದಾಗಿನಿಂದ ಬಡ ಜನರ, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ.

ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಇದರಿಂದ ಜನರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

2023ರ ವಿಧಾನ ಸಭೆ ಚುನಾವಣೆ ಪೂರ್ವ ಹತ್ತಾರೂ ಬಾರಿ ಸಮೀಕ್ಷೆ ನಡೆಸಿದರೂ ಕೂಡ ಬಿಜೆಪಿ 60-70 ಸ್ಥಾನ ಮಾತ್ರ ಗೆಲ್ಲುತ್ತಿದೆ. ಇದರಿಂದ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಿಸಲು ಬಿಜೆಪಿ ಕೇಂದ್ರದ ನಾಯಕರನ್ನು ಕರೆತಂದು ಪ್ರಚಾರ ನಡೆಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ ಮುಗನೂರ್, ತಾಲ್ಲೂಕು ಅಧ್ಯಕ್ಷ ಹಣಮಂತರಾವ್ ಚವ್ಹಾಣ, ನಗರ ಘಟಕದ ಅಧ್ಯಕ್ಷ ಅಬ್ದುಲ್ ನಸೀರ್, ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಶಿವರಾಜ ಹಾಸನಕರ್, ಅಶೋಕಕುಮಾರ ಸೋನಜಿ ಇದ್ದರು.