ಜನಸಂಖ್ಯೆ ಅನುಗುಣವಾಗಿ ಟಿಕೆಟ್ ನೀಡಲಿ

ರಾಯಚೂರು,ಜ.೧೨- ಲಿಂಗಸೂಗೂರು ಮೀಸಲು ಕ್ಷೇತ್ರಕ್ಕೆ ಜನಸಂಖ್ಯೆಯ ಅಧಾರದ ಮೇಲೆ ಮೂರು ಪಕ್ಷಗಳ ನಾಯಕರು ಸ್ಥಳೀಯರಿಗೆ ಟಿಕೇಟ್ ನೀಡಬೇಕು ಎಂದು ರಾಯಚೂರು ನಗರ ಉಸ್ಮಾನಿಯ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎನ್.ಮಹಾವೀರ್ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ರಾಜ್ಯ ಎಲ್ಲಾ ಮೀಸಲು ಕ್ಷೇತ್ರಗಳಲ್ಲಿ ಹೊಲೆಯ ಮಾದಿಗ,ಲಮಾಣಿ ಭೋವಿ ಸಮಾಜದ ಜನಸಂಖ್ಯೆ ಹೆಚ್ಚಿಗೆ ಇರುವ ಮೀಸಲು ಕ್ಷೇತ್ರಗಳಲ್ಲಿ ಆಯಾ ಜನಸಂಖ್ಯೆಗೆ ಅನುಗುಣವಾಗಿ ಟಿಕೇಟ್ ನೀಡಬೇಕು. ರಾಷ್ಟ್ರೀಯ ಹೆದ್ದಾರಿ-೧೬೭ ಆರ್.ಟಿ.ಓ ವೃತ್ತದಿಂದ ಹಿಡಿದು ಮಲಿಯಬಾದ್ ಮಾರೆಪ್ಪ ವೃತ್ತದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯದ ಎಲ್ಲಾ ಮೀಸಲು ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ಜನಸಂಖ್ಯೆ ಅನುಗುಣವಾಗಿ ಟಿಕೆಟ್ ನೀಡಬೇಕು.
ಯಾರಿಗೂ ಅನ್ಯಾಯವಾಗದಂತೆ ಆಯಾ ಮೀಸಲು ಕ್ಷೇತ್ರಗಳಲ್ಲಿ ಹೆಚ್ಚಿನ ಜನಸಂಖ್ಯೆ ಇರುವ ಹೊಲೆಯ ಮಾದಿಗ ಮತ್ತು ಲಮಾಣಿ ಭೋವಿ ಜನಾಂಗಕ್ಕೆ ಮೀಸಲು ಕ್ಷೇತ್ರದ ಟಿಕೆಟ್ ನೀಡಿ ಸಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಯ ಹೆದ್ದಾರಿ ೧೬೭ ಆರ್.ಟಿ.ಓ. ವೃತ್ತದಿಂದ ಮಲಿಯಬಾದ್ ಕ್ರಾಸ್ ಮಾರೆಪ್ಪ ವೃತ್ತದವರೆಗೆ ರಸ್ತೆ ಕಾಮಗಾರಿ ಅಪೂರ್ಣ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಬಾರಿ
ಮನವಿ ಸಲ್ಲಿಸಿದರು ಕೂಡ ಇದುವರೆಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಹಿಂದೇಟು ಹಾಕುತ್ತಿರುವುದು ಶೋಷನೀಯ. ಕೂಡಲೇ ೧೦೭ ರಾಷ್ಟ್ರೀಯ ಹೆದ್ದಾರಿಯ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಭುನಾಯಕ,ಉದಯಕುಮಾರ,ಕೆ.ವಿ.ಕಾಜಪ್ಪ,ರಿಜ್ವಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.