ಜನಸಾಮಾನ್ಯರ ಬದುಕು ಇನ್ನಷ್ಟು ಹೈರಾಣಾಗಿಸಿದೆ

ಮೈಸೂರು. ಜೂ.11: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು ತೊಣಚಿಕೊಪ್ಪಲ್ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಪಾಲಿಕೆ ಸದಸ್ಯ ಜೆ.ಗೋಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಜೆ.ಗೋಪಿ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಲೇ ಇದ್ದು ಜನಸಾಮಾನ್ಯರ ಬದುಕನ್ನು ಇನ್ನಷ್ಟು ಹೈರಾಣಾಗಿಸಿದೆ. ಈಗಾಗಲೇ ಕೊರೋನಾ ಲಾಕ್ ಡೌನ್ ನಿಂದ ಕೆಲಸವಿಲ್ಲದೆ ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಕಷ್ಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆ ಕಾಣುತ್ತಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಗಳೂ ಏರಿಕೆ ಕಾಣುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೂಡಲೇ ಇಳಿಸಬೇಕು ಎಂದರಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಕಾಂಗ್ರೆಸ್ ನ ಕೆಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.