ಜನಸ್ಪಂದನ ಕಾರ್ಯಕ್ರಮ ರದ್ದು

ಕಲಬುರಗಿ.ನ.5:ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ನ. 7 ರಂದು ಏರ್ಪಡಿಸಲಾಗಿರುವ ಜನಸ್ಪಂದನ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.