ಜನಸ್ವರಾಜ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜು

ವಿಜಯಪುರ, ನ.20- ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರ ನಗರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಜನ ಸ್ವರಾಜ ಸಮಾವೇಶ ಸಿದ್ಧತೆಯನ್ನು ವೇದಿಕೆಯ ಸಿದ್ಧತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ್ ಕೂಚಬಾಳ ಹಾಗೂ ಬಿಜೆಪಿ ಮುಖಂಡರು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವೇದಿಕೆಯು 40 ಅಡಿ ಅಡ್ಡ, 25 ಅಡಿ ಉದ್ದ ಅಳತೆಯ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. ವೇದಿಕೆ ಮುಂದಾಭಗದಲ್ಲಿ 3000 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆÉ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ವೇದಿಕೆಯ ಮೇಲೆ 30 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರಾಜ್ಯ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಸಚಿವರಾದ ಶ್ರೀರಾಮಲು, ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ತೇಜಶ್ವಿನಿ ಅನಂತಕುಮಾರ, ಜಿಲ್ಲೆಯ ಸಂಸದರಾದ ರಮೇಶ ಜಿಗಣಗಿ, ಜಿಲ್ಲೆಯ ಎಲ್ಲ ಶಾಸಕರು ಸಮಾವೇಶದಲ್ಲಿ ಭಾಗಿಯಾಗವಹಿಸಲಿದ್ದಾರೆ ಎಂದು ಹೇಳಿದರು.
ವಿಜಯಪುರ ಲೋಕ ಸಭಾ ವ್ಯಾಪ್ತಿಯ ಗ್ರಾಮ ಪಂಚಾಯತ ಸದಸ್ಯರು ನಗರ ಸಭೆ, ಪಟ್ಟಣ ಪಂಚಾಯತಿ ಸದಸ್ಯರು ಸೇರಿದಂತೆ, ಸಾವಿರಾರು ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸಮಾವೇಶದಲ್ಲಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೋಟ, ಬೆಳಗಾವಿ ವಿಭಾಗದ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಬಿಜೆಪಿ ಮುಖಂಡರಾದ ಗೂಳಪ್ಪ ಶಟಗಾರ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಜೋಗುರ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಪ್ರಕಾಶ ಮಿರ್ಜಿ, ಅಲ್ತಾಫ ಇಟಗಿ, ಉಮೇಶ ವಂದಾಲ, ನಗರ ಅಧ್ಯಕ್ಷರಾದ ಮಳುಗೌಡ ಪಾಟೀಲ, ವಿಜಯ ಜೋಶಿ, ಗೀತಾ ಕುಗನೂರ, ಭರತ ಕೋಳಿ, ವಿನಾಯಕ ದಹಿಂಡೆ, ವಿಠ್ಠಲ ನಡುವಿನಕೇರಿ, ಸೈಯ್ಯದ ನಿಡೋಣಿ, ಮಜರ ಇನಾಂದಾರ, ಶರಣು ಸಬರದ, ಶಿವಾನಂದ ಭುಯ್ಯಾರ, ಸತೀಶ ಡೋಬಳೆ, ರಾಜು ವಾಲಿ, ಸಂತೋಷ ನಿಂಬರಗಿ, ಸತೀಶ ಪಾಟೀಲ, ಸಂದೀಪ ಪಾಟೀಲ, ವಾರೀಶ ಕುಲಕರ್ಣಿ, ಸಮೀರ ಕುಲಕರ್ಣಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.