ಜನಾರ್ದನರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾತಿಗೆ ಕೋರ್ಟ್ ಸೂಚನೆ

ಬೆಂಗಳೂರು, ಏ.18-ಅಕ್ರಮ ಅದಿರು ಮಾರಾಟ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನರಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.
ಇದರಿಂದಾಗಿ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಜನಾರ್ದನರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕ ನಾಗೇಂದ್ರ ಸೇರಿದಂತೆ 16 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.
ವಿಧಾನಸಭಾ ಚುನಾವಣೆಗೆ ಜನಾರ್ದನ ರೆಡ್ಡಿ ಕೊಪ್ಪಳದ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.
2008 ಹಾಗೂ 2011ರ ಅವಧಿಯಲ್ಲಿ ಕಬ್ಬಿಣದ ಅದಿರು ಮಾರಾಟದಲ್ಲಿ 211 ಕೋಟಿ ನಷ್ಟ ಉಂಟು ಮಾಡಿರುವ ಆರೋಪ ಕುರಿತು ಪ್ರಕರಣ ದೂರು ದಾಖಲಾಗಿತ್ತು.