
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.09 ; ಅಕ್ರಮ ಗಣಿಗಾರಿಕೆ, ಸಂಪತ್ತಿನ ಆರೋಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಿಂದ ವಿದೇಶಗಳಲ್ಲಿನ ಹೂಡಿಕೆ ಬಗ್ಗೆ ಸಮನ್ಸ್ ಜಾರಿ ಮಾಡಿದೆ.
ಜನಾರ್ದನ ರೆಡ್ಡಿಯವರು ಬಂಡವಾಳ ಹೂಡಿಕೆ ಬಗ್ಗೆ ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ಸ್ವಿಡ್ಜೆರ್‌ಲ್ಯಾಂಡ್, ಸಿಂಗಾಪುರ, ಯುಎಇ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಮೂಲಕ ಸಿಬಿಐನ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಇ.ಚಂದ್ರಕಲಾ ಮನವಿ ಮಾಡಿದ್ದಾರೆ.
ಸಿಬಿಐ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 166(ಎ) ಪ್ರಕಾರ ಮನವಿ ಮಾಡಿದೆ.
ಜಿಎಲ್‌ಎ(ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನುಸಿಬಿಐ ಅಧಿಕಾರಿಗಳು ಕೋರಿದ್ದಾರೆ
ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರ, ಮಾಲೀಕರು ಮತ್ತು ಅಧಿಕೃತವಾಗಿ ಸಹಿ ಹಾಕಿರುವ ವ್ಯಕ್ತಿಯ ವಿವರವನ್ನು ಸಿಬಿಐ ಅಧಿಕಾರಿಗಳು ಕೇಳಿದ್ದಾರೆ.
ಗಾಲಿ ಜನಾರ್ದನ ರೆಡ್ಡಿಯವರು 2009-10ರ ಅವಧಿಯಲ್ಲಿ ಸುಮಾರು 7 ರಿಂದ 8ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮ ಮಾರಾಟ ಮಾಡಿದ್ದರು.
ಅಕ್ರಮ ಅದಿರು ಮಾರಾಟ ಮಾಡಿ ಹಣವನ್ನು ವಿವಿಧ ದೇಶಗಳಲ್ಲಿ ಗಾಲಿ ಜನಾರ್ಧನರೆಡ್ಡಿ ಬಂಡವಾಳ ಹೂಡಿದ್ದರೆಂಬ ಮಾಹಿತಿಇದೆ.
ಅದಿರು ಮಾರಾಟ ಮಾಡಿ ಅದರ ಮುಂದಿನ ಫಲಾನುಭವಿಗಳು, ಕಂಪೆನಿಯ ಷೇರುಗಳ ವಿವರವನ್ನು ಸಹ ಸಿಬಿಐ ಅಧಿಕಾರಗಳು ಕೇಳಿದ್ದಾರೆ.