ಜನೋತ್ಸವ ನಾಚಿಗೇಡು-ವಿನಯ್

ಚಿಕ್ಕಬಳ್ಳಾಪುರ,ಸೆ೮:ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕವಾಗಿ ಸುರಿದಿರುವ ಮಳೆಯಿಂದಾಗಿ ರೈತರು ಮತ್ತು ಜನ ಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅವರ ಕಷ್ಟಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಬದಲಿಗೆ ರಾಜ್ಯ ಬಿಜೆಪಿ ಸರ್ಕಾರ ಜನೋತ್ಸವ ಮಾಡಲು ಹೊರಟಿದೆ ಇದರ ನೇತೃತ್ವವಹಿಸಿರುವ ಆರೋಗ್ಯ ಸಚಿವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಶ್ರೀದೇವಿ ಕಲ್ಯಾಣ ಮಂಟಪದ ಭಾರತ ಜೋಡೋ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಮತ್ತು ರೈತರು ಕಷ್ಟದಲ್ಲಿ ಸಿಲುಕಿದ್ದಾರೆ ಅದೇ ರೀತಿ ರಾಜಧಾನಿ ಬೆಂಗಳೂರು ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನರು ತೊಂದರೆಗೆ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ಬದಲಿಗೆ ರಾಜ್ಯ ಸರ್ಕಾರ ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿ ಜನೋತ್ಸವ ಮಾಡಲು ಹೊರಟಿದೆ ರಾಜ್ಯದ ಜನರ ಹಿತವನ್ನು ಸರ್ಕಾರ ಕಡೆಗಣಿಸಿದೆ ಎಂದು ವಾಗ್ದಾಳಿ ನಡೆಸಿದರು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯ ಆರ್ಭಟದಿಂದ ಅಭಿವೃದ್ಧಿಯ ಮುಖವಾಡ ಕಳಚಿ ಬಿದ್ದಿದೆ ಕೊತ್ತನೂರು ಗ್ರಾಮದಲ್ಲಿ ನೀರು ನುಗ್ಗಿದೆ ರಾತ್ರಿಯಿಡೀ ಗ್ರಾಮಸ್ಥರು ತೊಂದರೆಯನ್ನು ಅನುಭವಿಸಿದ್ದಾರೆ ರಾತ್ರಿಯಿಡೀ ಜಾಗರಣೆ ಜಲದಿಗ್ಬಂಧನದಲ್ಲಿ ಸಿಲುಕಿದ್ದಾರೆ ಅವರಿಗೆ ಸಹಾಯ ಮಾಡಲು ಸಾಧ್ಯವಿಲ್ಲದ ಆರೋಗ್ಯ ಸಚಿವರು ಜನೋತ್ಸವದ ಸಭೆಗಳಲ್ಲಿ ಭಾಗವಹಿಸಿದ್ದಾರೆ ಕ್ಷೇತ್ರದ ಜನರ ಬಗ್ಗೆ ಇವರಿಗೆ ಕಾಳಜಿ ವ್ಯಕ್ತವಾಗಿದೆ ಜನರಿಗೆ ಪರಿಹಾರ ನೀಡುವ ಬದಲಿಗೆ ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿ ಜನೋತ್ಸವ ಮಾಡಲು ಹೊರಟಿದ್ದಾರೆ ಮುಂದಿನ ದಿನಗಳಲ್ಲಿ ಇವರಿಗೆ ಜನರೇ ಸೂಕ್ತ ಪಾಠ ಕಳುಹಿಸುತ್ತಾರೆ ಎಂದು ಟಾಂಗ್ ನೀಡಿದರು
ಚಿಕ್ಕಬಳ್ಳಾಪುರ ನಗರದ ಅಭಿವೃದ್ಧಿಗಾಗಿ ಇರುವ ನಗರಸಭೆಯಲ್ಲಿ ಪೌರಾಯುಕ್ತರು ಇಲ್ಲದೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಜನ ಸಾಮಾನ್ಯರು ಅನೇಕ ರೀತಿಯ ತೊಂದರೆಯನ್ನು ಅನುಭವಿಸುತ್ತಿದ್ದಾರೆ ನಗರಸಭೆ ಅಧ್ಯಕ್ಷರು ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದ ಅವರು ಒಟ್ಟಾರೆಯಾಗಿ ಚಿಕ್ಕಬಳ್ಳಾಪುರ ನಗರ ಮತ್ತು ಜಿಲ್ಲೆಯನ್ನು ಆರೋಗ್ಯ ಸಚಿವರ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಕ್ಷೇತ್ರದ ಜನರ ಹಿತಕ್ಕಾಗಿ ಇವರಿಗೆ ಪಕ್ಷದ ಹಿತವೇ ಮುಖ್ಯವಾಗಿದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕಾಲುವೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವ ಬದಲಿಗೆ ಜನರಿಗೆ ಅನುಕೂಲ ಕಲ್ಪಿಸಲು ಹೊರಟುವರಿಗೆ ರಾಜಕೀಯವಾಗಿ ಕಿರುಕುಳ ನೀಡುವ ಉದ್ದೇಶದಿಂದ ಅಧಿಕಾರಿಗಳ ಮೂಲಕ ನೋಟಿಸ್ ಕೊಡುವುದೇ ಇವರ ಸಾಧನೆಯಾಗಿದೆ ಎಂದು ಲೇವಡಿ ಮಾಡಿದರು.