
ಕಲಬುರಗಿ.ಮಾ.06:ಕಲಬುರಗಿಯ ಜಗತ್ ಸರ್ಕಲ್ ಬಳಿಯಿರುವ ಕನ್ನಡ ಸಾಹಿತ್ಯ ಸಂಘದ ಕಟ್ಟಡದಲ್ಲಿ ಮಾರ್ಚ್ 7 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜನೌಷಧಿ ದಿವಸ್ ಆಚರಿಸಲಾಗುತ್ತಿದೆ.
ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಜನೌಷಧಿ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನೌಷಧಿ ಕೇಂದ್ರಗಳ ಮಾಲೀಕರು ಮತ್ತು ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.