ಜನ್ನಘಟ್ಟದಲ್ಲಿ ಹೋಳಿ ಹುಣ್ಣಿಮೆ ನರಸಿಂಹಸ್ವಾಮಿಗೆ ವಿಶೇಷ ಪೂಜೆ

ಕೋಲಾರ,ಮಾ.೩೦: ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಗ್ರಾಮದ ಪ್ರಸಿದ್ದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಸ್ವಾಮಿಗೆ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಾಡಿದ್ದು, ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
ಪೂಜಾ ಕಾರ್ಯದಲ್ಲಿ ಅರ್ಚಕರಾದ ವಸಂತಾಚಾರ್ ಕುಟುಂಬದವರು ನೇತೃತ್ವ ವಹಿಸಿದ್ದು, ಜಿಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಸುಗಟೂರು ಎಸ್‌ಎಫ್‌ಸಿಎಸ್ ಅಧ್ಯಕ್ಷ ಟಿ.ವಿ.ತಿಮ್ಮರಾಯಪ್ಪ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಟಿ.ವಿ.ಕೃಷ್ಣಪ್ಪ, ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಎಸ್.ಶಾಂಭಮೂರ್ತಿ ಮತ್ತಿತರರು ಹಾಜರಿದ್ದರು.