ಜನ್ಮ ಭೂಮಿ ಋಣ ತೀರಿಸಲು ಪ್ರಯತ್ನಿಸಿ

ಬೀದರ್:ನ.9: ಯುವಕರು ಜನ್ಮ ಭೂಮಿಯ ಋಣ ತೀರಿಸಲು ಪ್ರಯತ್ನಿಸಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ಬೀದರ್ ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದಲ್ಲಿ ಇರುವ ಮಿಲಿಟರಿ ಕ್ಯಾಂಪನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಪ್ರಾಯೋಜಕತ್ವದಲ್ಲಿ ಗ್ಲೊಬಲ್ ಸೈನಿಕ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭ್ಯರ್ಥಿಗಳ ಸೇನಾ ಭರ್ತಿ ಪೂರ್ವ ತರಬೇತಿ ಶಿಬಿರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ತಾಯ್ನೆಲದ ಸೇವೆಗೆ ಸದಾ ಸಿದ್ಧರಿರಬೇಕು. ಸೇನೆ ಸೇರ್ಪಡೆಗೆ ಮುಂದೆ ಬರಬೇಕು ಎಂದು ತಿಳಿಸಿದರು.

ಯೋಧರು ದೇಶಕ್ಕಾಗಿ ತಮ್ಮ ಸಕಲ ಸಂತೋಷಗಳನ್ನು ತ್ಯಾಗ ಮಾಡುತ್ತಾರೆ. ಅವರು ಗಡಿ ಕಾಯುತ್ತಿರುವುದರಿಂದಲೇ ದೇಶದ ಜನ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಯುವಕರನ್ನು ಸೇನೆ ಭರ್ತಿಗೆ ಅಣಿಗೊಳಿಸುತ್ತಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಗ್ಲೊಬಲ್ ಸೈನಿಕ ಅಕಾಡೆಮಿಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಐದು ವರ್ಷಗಳ ಅವಧಿಯಲ್ಲಿ ಕಲ್ಯಾಣ ಕರ್ನಾಟಕದ ಐದು ಸಾವಿರ ಯುವಕರನ್ನು ರಕ್ಷಣಾ ಇಲಾಖೆಯ ವಿವಿಧ ಹುದ್ದೆಗಳ ನೇಮಕಗೊಳಿಸುವ ಗುರಿ ಹೊಂದಲಾಗಿದೆ ಎಂದು ನಿವೃತ್ತ ಕರ್ನಲ್, ಗ್ಲೊಬಲ್ ಸೈನಿಕ ಅಕಾಡೆಮಿಯ ಅಧ್ಯಕ್ಷ ಶರಣಪ್ಪ ಸಿಕೇನಪುರ ಹೇಳಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು.

10 ಮೀಟರ್ ರೈಫಲ್ ಶೂಟಿಂಗ್‍ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗ್ಲೊಬಲ್ ಸೈನಿಕ ಅಕಾಡೆಮಿಯ 9ನೇ ತರಗತಿಯ ವಿದ್ಯಾರ್ಥಿ ಧಾವಲ್ ಅವರನ್ನು ಸನ್ಮಾನಿಸಲಾಯಿತು.

ಉದ್ಯಮಿ ಬಸವರಾಜ ಧನ್ನೂರ, ಗ್ಲೊಬಲ್ ಸೈನಿಕ ಅಕಾಡೆಮಿಯ ಸ್ಕ್ವಾಡ್ರನ್ ಲೀಡರ್ ಎವಿಲಿನ್ ಜಾರ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕಾರಂಜಿ, ಸುಬೇದಾರ್ ಮಡೆಪ್ಪ, ರಾಮ ಲಾವಜಿ, ವಿಮಲಾ ಸಿಕೇನಪುರ ಇದ್ದರು.