ಜನ ಕಲ್ಯಾಣದತ್ತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು: ಸಚಿವ ಎಚ್.ಕೆ.ಪಾಟೀಲ


ಗದಗ, ಜೂ.13: ಜಿಲ್ಲೆಯಲ್ಲಿ ಜನಪರ ಹಾಗೂ ಪಾರದರ್ಶಕ ಆಡಳಿತ ನೀಡುವದರ ಮೂಲಕ ಬಡÀವರ ಪರ ಕೆಲಸ ನಿರ್ವಹಿಸುವಲ್ಲಿ ಗದಗ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯದಲ್ಲಿ ಅಗತ್ಯದ ಎಲ್ಲ ಸಹಕಾರವನ್ನು ಒದಗಿಸಲಾಗುವದು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಮೊದಲು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಹೊಸ ಸರಕಾರವು ಬಡವರ ಪರವಾಗಿ ನಿರ್ವಹಿಸುತ್ತಿದೆ. ಅಲ್ಲದೇ ಸರಕಾರ ಜಾರಿಗೊಳಿಸಲಿರುವ ಅನ್ನಭಾಗ್ಯ ಹಾಗೂ ಉಚಿತ ವಿದ್ಯುತ ವಿತರಣೆಗೆ ಈಗಿನಿಂದಲೇ ಎಲ್ಲ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳುವಂತೆ ತಿಳಿಸಿದರು. ಸರಕಾರದಿಂದ ಜಾರಿಯಾಗುವ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನಿಗಾವಹಿಸಬೇಕು. ಸರಕಾರ ಜಾರಿಗೊಳಿಸುವ ಮಹತ್ವಾಕಾಂಕ್ಷೆ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿ ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಪಾತ್ರ ಅತೀ ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಬಡವರ ಶ್ರೇಯೋಭಿವೃದ್ಧಿಗಾಗಿ ಮುಂದಾಗಬೇಕು. ಯೋಜನೆಗಳ ಜಾರಿ ಕುರಿತು ಸರ್ಕಾರದ ಆದೇಶ ಹೊರಡಿಸಿದ ನಾಲ್ಕೇ ದಿನಗಳಲ್ಲಿ ಯೋಜನೆಯ ಅನುಷ್ಠಾನ ಆರಂಭವಾಗಲೇ ಬೇಕು. ವಿನಾಕಾರಣ ವಿಳಂಭ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು.
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ ಅಕ್ಕಿ ಬಂದಿರುತ್ತವೆ ವಿಷಯವನ್ನು ಸಚಿವರು ಪ್ರಸ್ತಾಪಿಸಿದಾಗ ಇದಕ್ಕೆ ಉತ್ತರಿಸಿದ ಆಹಾರ ಇಲಾಖೆ ಉಪನಿರ್ದಶಕರು ಪಡಿತರ ಅಕ್ಕಯಲ್ಕಿ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ಕಳುಹಿಸಲಾಗುತ್ತಿದ್ದು ಈ ಸಾರವರ್ಧಿತ ಅಕ್ಕಿಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕಾಂಶಗಳು ಹೊಂದಿದ ಆಹಾರವಾಗಿದೆ ಎಂದು ವಿವರಣೆ ನೀಡಿದರು. ತದನಂತರ ಮಾತನಾಡಿದ ಸಚಿವರು ಪಡಿತರ ಅಕ್ಕಿಯನ್ನು ಅಕ್ರಮ ಸಾಗಾಟದ ಬಗ್ಗೆ ಹಲವಾರು ದೂರುಗಳು ಬರುತ್ತಿವೆ ಇದಕ್ಕೆ ಕಡಿವಾಣ ಹಾಕಲೆಬೇಕು. ವಿಧ್ಯುತ ಬಿಲ್ಲ ಕುರಿತು ಸಾರ್ವಜನಿಕರಲ್ಲಿ ಹಲವಾರು ಗೊಂದಲಗಳು ಉಂಟಾಗಿದ್ದು ಈ ಕುರಿತು ಸಂಬಂಧಿತ ಇಲಾಖಾಧಿಕರಿಗಳು ಮಾಧ್ಯಮದ ಮೂಲಕ ಸೂಕ್ತ ಸ್ಪಷ್ಟಿಕರಣವನ್ನು ನೀಡುವ ಮೂಲಕ ಸಾರ್ವಜನಿಕರ ಗೊಂದಲ ನಿವಾರಣೆಗೆ ಮುಂದಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೆÇೀಲಿಸ್ ಅಧೀಕ್ಷಕ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಮುಖ್ಯಸ್ಥರು ಹಾಜರಿದ್ದರು.