ಜನ ಕಲ್ಯಾಣವೇ ಸರ್ಕಾರದ ಜನಪರ ನೀತಿ

ಚಿತ್ರದುರ್ಗ.ಮಾ.೫; ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಿವೆ ಎಂಬುದನ್ನು ತಿಳಿಸುವುದು ಫಲಾನುಭವಿಗಳ ಸಮ್ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಹಾಗೂ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ರೂ.1,484.69 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಆಳುವುದು ಬೇರೆ, ಆಡಳಿತ ಬೇರೆ. ಸರ್ಕಾರದ ಆಡಳಿತ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ.  ಜನಪ್ರತಿನಿಧಿಗಳು ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು. ಜನರ ಸಂಕಷ್ಟ ತಿಳಿದು, ಸಮಸ್ಯೆಗಳನ್ನು ಅರಿತು ಪರಿಹಾರ ನೀಡಬೇಕು. ಜನ ಕಲ್ಯಾಣಕ್ಕಾಗಿ ಜಾರಿಗೆ ತರುವ ಯೋಜನೆಗಳು ಜನರ ಮೇಲಿನ ಸರ್ಕಾರದ ಹೂಡಿಕೆಯಾಗಿದೆ. ಇದರಿಂದ ಜನರ ದುಡಿಮೆ ಹಾಗೂ ಜೀವನ ಮಟ್ಟ ಸುಧಾರಿಸಿ ರಾಜ್ಯದ ಆದಾಯ ಹೆಚ್ಚಾಗುತ್ತದೆ.  ಸರ್ಕಾರ ಯೋಜನೆಗಳ ಲಾಭ ಪಡೆದು ಜನರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಮೃದ್ಧಿಯಾಗಬೇಕು. ಯೋಜನೆಯನ್ನು ಬಳಸಿಕೊಂಡು ಅಭಿವೃದ್ಧಿಯಾದವರನ್ನು ನೋಡಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು. ಚಿತ್ರದುರ್ಗ ಜಿಲ್ಲೆಯ ಈ ಸಮಾವೇಶದಲ್ಲಿ ಇμÉ್ಟೂಂದು ಸಂಖ್ಯೆಯಲ್ಲಿ ಫಲಾನುಭವಿಗಳ ಒಂದಡೆ ನೋಡುವ ಭಾಗ್ಯ ನನ್ನದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದರು.