ಜಮೀನಿನಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಮರಗಳು, ರೈತ ಕಂಗಾಲು

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.04- ಜಮೀನಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ತೆಂಗಿನಕಾಯಿ, ತೇಗದ ಮರಗಳು, ತೆಂಗಿನ ಮರಗಳು ಸುಟ್ಟು ಕರಕಲಾದ ಘಟನೆ ಚಾಮರಾಜನಗರದ ತಾಲೂಕಿನ ಆಲೂರು ಹೊಮ್ಮ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಚಾಮರಾಜನಗರ ತಾಲೂಕಿನ ಆಲೂರು ಹೊಮ್ಮ ಗ್ರಾಮದಲ್ಲಿ ಎಚ್.ಎಸ್. ಮಲ್ಲಣ್ಣ ಎಂಬವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿದ್ದ ತೆಂಗಿನಕಾಯಿಗೆ ಬೆಂಕಿ ಬಿದ್ದು ಬಳಿಕ ಜಮೀನಿನಲ್ಲಿದ್ದ ತೇಗದ ಮರಗಳು ತೆಂಗಿನ ಮರಗಳಿಗೂ ಬೆಂಕಿ ತಗಲಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ.