ಜಮ್ಮೀರ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಖಂಡನೆ

ಕಲಬುರಗಿ:ಮೇ.22: ಸಚಿವರಾಗಿ ಜಮ್ಮೀರ ಅಹ್ಮದ್ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಭಾಷಾವಾರು ರಾಜ್ಯಗಳಿಗೆ ಮಾಡಿದ ಅಪಮಾನವಾಗಿದೆ.ಸುಂದರ ಸಮಾರಂಭಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಮ್ಮೀರ ಅಹ್ಮದ್ ಖಾನ್ ಕನ್ನಡ ವಿರೋಧಿ ನಡೆಯನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತದೆ.ಕರ್ನಾಟಕ ಸರಕಾರ ಕನ್ನಡವನ್ನು ಅಧಿಕೃತವಾಗಿ ಆಡಳಿತ ಭಾಷೆ ಎಂದು ಒಪ್ಪಿದೆ.ಕನ್ನಡವನ್ನು ಅನುಷ್ಠಾನಗೊಳಿಸಬೇಕಾದ ಸಚಿವರೇ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ತೀರ ಅನುಚಿತ ನಡೆಯಾಗಿದೆ.ಈ ವಿಷಯವನ್ನು ಮುಖ್ಯಮಂತ್ರಿ ಅವರು ಗಂಭೀರವಾಗಿ ಪರಿಗಣಿಸಿ,ತಮ್ಮ ಸಚಿವ ಸಂಪುಟದ ಸಚಿವರು ಕನ್ನಡದಲ್ಲೇ ಆಡಳಿತ ನಡೆಸುವುದರ ಜೊತೆಗೆ ಸಾರ್ವಜನಿಕವಾಗಿ ಮತ್ತು ವೈಯಕ್ತಿಕವಾಗಿ ಕನ್ನಡದಲ್ಲೇ ವ್ಯವಹರಿಸುವಂತೆ ಸೂಚಿಸಬೇಕೆಂದು ಅವರು ಸರಕಾರಕ್ಕೆ ಮನವಿ ಮಾಡಿದರು.